Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:15 - ಕನ್ನಡ ಸತ್ಯವೇದವು C.L. Bible (BSI)

15 ಮೂರ್ಖನ ನಡತೆ ಸ್ವಂತ ಮೆಚ್ಚುಗೆಗೆ; ಬುದ್ಧಿವಂತ ಕಿವಿಗೊಡುವನು ಉಚಿತಾಲೋಚನೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮೂರ್ಖನ ನಡತೆ ಅವನ ಗಣನೆಗೆ ಸರಿ; ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮೂಢನು ತನ್ನ ದಾರಿಯನ್ನೇ ಒಳ್ಳೆಯದೆಂದು ಭಾವಿಸಿಕೊಂಡಿರುತ್ತಾನೆ. ಜ್ಞಾನಿಯಾದರೋ ಉಪದೇಶಕ್ಕೆ ಕಿವಿಗೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೂರ್ಖನ ಮಾರ್ಗವು ತನ್ನ ಕಣ್ಣುಗಳಿಗೆ ಸರಿಯಾಗಿದೆ, ಆದರೆ ಜ್ಞಾನಿಯು ಸಲಹೆಗೆ ಕಿವಿಗೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:15
19 ತಿಳಿವುಗಳ ಹೋಲಿಕೆ  

ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.


ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.


ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ.


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೆ ಒಯ್ಯುವ ಹಾದಿಯಾಗಬಹುದು.


ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಆದರೆ ಅವನ ಅಂತರಂಗವನ್ನು ವೀಕ್ಷಿಸುವಂಥವನು ಸರ್ವೇಶ್ವರ.


ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ.


ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.


ಮಾನವರ ನಡವಳಿಕೆ ಅವರವರ ನೋಟಕ್ಕೆ ನೇರ; ಅವರ ಅಂತರಂಗವನ್ನು ವೀಕ್ಷಿಸಬಲ್ಲವನೋ ಸರ್ವೇಶ್ವರ.


ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.


ತಮ್ಮ ಕೊಳೆಯನ್ನು ತೊಳೆದುಕೊಳ್ಳದ, ತಾವೆ ಪರಿಶುದ್ಧರೆಂದು ಎಣಿಸಿಕೊಳ್ಳುವ ಜನರುಂಟು.


ಹಣವಂತ ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವನು; ವಿವೇಕಿಯಾದ ಬಡವ ಅವನೆಂಥವನೆಂದು ಅರ್ಥಮಾಡಿಕೊಳ್ಳುವನು.


ಬುದ್ಧಿಮಾತಿಗೆ ಕಿವಿಗೊಡದ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.


ವಿವೇಕದಿಂದ ಉತ್ತರಿಸಬಲ್ಲ ಏಳು ಬುದ್ಧಿವಂತರಿಗಿಂತ ತಾನೇ ಜ್ಞಾನಿ ಎಂದುಕೊಳ್ಳುತ್ತಾನೆ ಸೋಮಾರಿ.


ಬುದ್ಧಿವಂತ ಮಗ ತಂದೆಯ ಶಿಕ್ಷಣವನ್ನು ಕೇಳುವನು; ಕಿತ್ತಾಡುವ ಮಗ ಗದರಿಕೆಯನ್ನೂ ಕೇಳಲೊಲ್ಲನು.


ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು