Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:16 - ಕನ್ನಡ ಸತ್ಯವೇದವು C.L. Bible (BSI)

16 ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು; ಜಾಣನು ನಿಂದೆಯನ್ನು ಮರೆಮಾಚುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೂಢನು ತನ್ನ ಸಿಟ್ಟನ್ನು ತಟ್ಟನೆ ತೋರಿಸುವನು. ಆದರೆ ಜ್ಞಾನಿಯು ಅವಮಾನವನ್ನು ಕಡೆಗಣಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೂರ್ಖನ ಕೋಪವು ತಟ್ಟನೆ ರಟ್ಟಾಗುವುದು, ಆದರೆ ಜಾಣನು ಅವಮಾನವನ್ನು ನಿರ್ಲಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:16
12 ತಿಳಿವುಗಳ ಹೋಲಿಕೆ  

ಮೂಢನು ತನ್ನ ಕೋಪವನ್ನೆಲ್ಲ ವ್ಯಕ್ತಪಡಿಸುವನು; ಜ್ಞಾನಿ ತನ್ನ ಕೋಪವನ್ನು ತಡೆಹಿಡಿದು ಶಮನಗೊಳ್ಳುವನು.


ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.


ಜಗಳವೆಬ್ಬಿಸುತ್ತದೆ ದ್ವೇಷ; ಪಾಪಗಳ ಮರೆಸುತ್ತದೆ ಪ್ರೇಮ.


ತಪ್ಪನ್ನು ಮನ್ನಿಸುವವನು ಪ್ರೀತಿಯನ್ನು ಅರಸುತ್ತಾನೆ; ತಪ್ಪನ್ನು ಎತ್ತಿ ಆಡುವವನು ಆಪ್ತನನ್ನೂ ಕಳೆದುಕೊಳ್ಳುತ್ತಾನೆ.


ಆತ್ಮಸ್ವಾಧೀನವಲ್ಲದ ಮನುಷ್ಯ ಗೋಡೆಬಿದ್ದು ಕಾವಲಿಲ್ಲದ ಹಾಳೂರು.


ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ತಕ್ಕ ದಂಡನೆ.


ಬುದ್ಧಿವಂತರ ಹೃದಯ ಜ್ಞಾನದ ಆಶ್ರಯ; ಬುದ್ಧಿಹೀನರ ಹೃದಯ ಜ್ಞಾನದ ಶೂನ್ಯ.


ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.


ಸತ್ಯವಾದಿ ಪ್ರಾಮಾಣಿಕ ಸಾಕ್ಷಿ; ಸುಳ್ಳು ಸಾಕ್ಷಿ ಕಪಟ ವಾಚಾಳಿ.


ಕಲ್ಲು ಭಾರ, ಮರಳು ಭಾರ, ಮೂಢನ ರೇಗಾಟ ಇವೆರಡಕ್ಕೂ ಬಲುಭಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು