Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:18 - ಕನ್ನಡ ಸತ್ಯವೇದವು C.L. Bible (BSI)

18 ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕತ್ತಿ ತಿವಿದ ಹಾಗೆ ದುಡುಕಿ ಮಾತಾಡುವವರುಂಟು; ಮತಿವಂತರ ಮಾತೇ ಮದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದುಡುಕಿದ ಮಾತು ಖಡ್ಗದಂತೆ ನೋವು ಮಾಡುತ್ತದೆ; ಜ್ಞಾನಿಯ ಮಾತು ಗುಣಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ, ಆದರೆ ಜ್ಞಾನವಂತರ ನಾಲಿಗೆಯು ಸ್ವಸ್ಥತೆಯನ್ನು ತರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:18
17 ತಿಳಿವುಗಳ ಹೋಲಿಕೆ  

ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.


ಸಂತೈಸುವ ನಾಲಿಗೆ ಜೀವವೃಕ್ಷಕ್ಕೆ ಸಮಾನ; ಹಿಂಸಾತ್ಮಕ ನಾಲಿಗೆ ಮನಮುರಿತಕ್ಕೆ ಸಾಧನ.


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II


ಜನರಲ್ಲಿನ ಬುದ್ಧಿವಂತ ನಾಯಕರು ಅನೇಕರಿಗೆ ಬುದ್ಧಿಹೇಳುವರು. ಕೆಲಕಾಲ ಅವರು ಕತ್ತಿ-ಬೆಂಕಿ-ಸೆರೆ-ಸೂರೆಗಳಿಗೆ ತುತ್ತಾಗುವರು.


ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಕೊಡತಿಗೆ, ಕತ್ತಿಗೆ, ಹರಿತವಾದ ಬಾಣಕ್ಕೆ ಸಮಾನನು.


ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.


ಕೆಟ್ಟದೂತನು ಕೇಡಿಗೆ ಸಿಕ್ಕಿಸುವನು; ನಂಬಿಕಸ್ಥ ದೂತನು ಸುಕ್ಷೇಮಕಾರನು.


ಕಂಡುಹಿಡಿಯಬಲ್ಲವನಿಗೆ ಅವು ಜೀವದಾಯಕ; ಇಡೀ ದೇಹಕ್ಕೆ ಅವು ಆರೋಗ್ಯಕರ.


ನಾಲಗೆಯೆಂಬ ಅಲಗನವರು ಮಸೆದಿಹರು I ನಂಜುಮಾತೆಂಬ ಅಂಬನು ಹೂಡಿಹರು II


ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.


ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.


ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II


ಸತ್ಯವಾದಿ ಪ್ರಾಮಾಣಿಕ ಸಾಕ್ಷಿ; ಸುಳ್ಳು ಸಾಕ್ಷಿ ಕಪಟ ವಾಚಾಳಿ.


ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು