Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:2 - ಕನ್ನಡ ಸತ್ಯವೇದವು C.L. Bible (BSI)

2 ಒಳ್ಳೆಯವನು ಸರ್ವೇಶ್ವರನ ದಯೆಯನ್ನು ಗಳಿಸುವನು; ಕೆಟ್ಟವನ ಕುಯುಕ್ತಿ ದೈವಖಂಡನೆಯನ್ನು ಪಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಒಳ್ಳೆಯವನಿಗೆ ದಯೆಮಾಡುವನು; ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಒಳ್ಳೆಯವನನ್ನು ಸ್ವೀಕರಿಸಿಕೊಳ್ಳುವನು; ಕುಯುಕ್ತಿಯುಳ್ಳವನನ್ನು ಖಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಒಳ್ಳೆಯವನು ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ, ಆದರೆ ಕುಯುಕ್ತಿ ಮಾಡುವವನನ್ನು ಅವರು ದುಷ್ಟನೆಂದು ಖಂಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:2
14 ತಿಳಿವುಗಳ ಹೋಲಿಕೆ  

ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಳ್ಳುವನು ಸರ್ವೇಶ್ವರನ ಕೃಪಾಕಟಾಕ್ಷಕ್ಕೆ ಪಾತ್ರನಾಗುವನು.


ಬಾರ್ನಬನು ಸತ್ಪುರುಷನು, ಪವಿತ್ರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು. ಅನೇಕ ಜನರು ಪ್ರಭುವಿನ ಅನುಯಾಯಿಗಳಾದರು.


ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ I ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ II


ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು.


ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.


ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಸಾವೆಂಬ ಸಮರಕ್ಕೆ ವಿರಾಮವಿಲ್ಲ; ಅಂತೆಯೇ ದುಷ್ಟತನದ ಮೂಲಕ ಅದರಿಂದ ತಪ್ಪಿಸಿಕೊಳ್ಳಲಾಗದು.


ಬಿದ್ದರು ಹೊರನಾಡಿಗರು ತಾವು ತೋಡಿದ ಗುಣಿಯಲೆ I ಸಿಕ್ಕಿಕೊಂಡಿತವರ ಕಾಲು ಅವರೊಡ್ಡಿದ ಬಲೆಯಲೆ II


ಆಗ ಅಬ್ಷಾಲೋಮನು‍, “ನೋಡಿ, ನಿಮ್ಮ ವ್ಯಾಜ್ಯ ಒಳ್ಳೆಯದು ಹಾಗು ನ್ಯಾಯವಾದದ್ದು. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ರಾಜಪ್ರತಿನಿಧಿ ಒಬ್ಬನೂ ನೇಮಕವಾಗಿಲ್ಲ.


ಆಗ ದೇವರಿಗೂ ಮಾನವರಿಗೂ ಪ್ರಿಯನಾಗುವೆ, ದಯೆ ದಾಕ್ಷಿಣ್ಯವನ್ನು ಪಡೆಯುವೆ.


ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.


ಕೆಟ್ಟದ್ದನ್ನು ಕಲ್ಪಿಸುವವರು ಮಾರ್ಗಭ್ರಷ್ಟರು; ಒಳ್ಳೆಯದನ್ನು ಕಲ್ಪಿಸುವವರು ಮರ್ಯಾದಸ್ಥರು.


ಮುಂಗೋಪಿಗೆ ಬುದ್ಧಿಮಟ್ಟುಂಟು; ವಿವೇಕಿಗಾದರೊ ಸಹನೆಯುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು