Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:21 - ಕನ್ನಡ ಸತ್ಯವೇದವು C.L. Bible (BSI)

21 ಸಜ್ಜನರಿಗೆ ಸಂಭವಿಸದು ಯಾವ ಕೆಡುಕು; ದುರ್ಜನರಿಗೆ ತುಂಬಿತುಳುಕುವುದು ಕೇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು; ದುರ್ಜನರಿಗೆ ಕೇಡು ತುಂಬಿತುಳುಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸಜ್ಜನರು ಯೆಹೋವನಿಂದ ಕ್ಷೇಮವಾಗಿರುವರು. ಆದರೆ ದುರ್ಜನರಿಗೆ ಅನೇಕ ತೊಂದರೆಗಳಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀತಿವಂತನಿಗೆ ಯಾವ ಕೇಡೂ ಸಂಭವಿಸದು, ಆದರೆ ದುಷ್ಟರು ಕೇಡಿನಿಂದ ತುಂಬಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:21
17 ತಿಳಿವುಗಳ ಹೋಲಿಕೆ  

ನೀವು ಒಳ್ಳೆಯದನ್ನು ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಬಗೆಯುವವರು ಯಾರು?


ಹಾನಿಯೊಂದೂ ನಿನಗೆ ಸಂಭವಿಸದು I ಕೆಡಕು ನಿನ್ನ ಗುಡಾರದ ಬಳಿ ಸುಳಿಯದು II


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.


ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.


ನೀನು ಸನ್ಮಾನದಿಂದಲ್ಲ, ಅವಮಾನದಿಂದ ತುಂಬಿರುವೆ; ನೀನೂ ಕುಡಿ; ಕುಡಿದು ನಗ್ನನಾಗು. ಸರ್ವೇಶ್ವರಸ್ವಾಮಿಯ ಬಲಗೈಯಲ್ಲಿರುವ ಕೋಪದ ಕೊಡ ನಿನ್ನ ಪಾಲಿಗೂ ಬರುವುದು. ಅವಮಾನವೇ ನಿನ್ನ ಸನ್ಮಾನವನ್ನು ಆವರಿಸಿಬಿಡುವುದು.


ಕೆಟ್ಟವನು ತನ್ನ ಕರ್ಮದ ಕಹಿಫಲದಿಂದ ತಿಂದು ತೇಗುವನು; ಒಳ್ಳೆಯವನು ತನ್ನ ಕಾರ್ಯದ ಸತ್ಫಲದಿಂದ ತೃಪ್ತನಾಗುವನು.


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಪ್ರಭು ಕಾಯುವನು ನಿನ್ನ ಪ್ರಾಣವನು I ಸಕಲ ಕೇಡಿನಿಂದ ಕಾಪಾಡುವನು II


ನನ್ನ ಮಾತಿಗೆ ಕಿವಿಗೊಡುವವರಾದರೋ ಸುರಕ್ಷಿತವಾಗಿರುವರು, ಕೇಡಿಗೆ ಭಯಪಡದೆ ನೆಮ್ಮದಿಯಾಗಿ ಬಾಳುವರು.


ಕೇಡನ್ನು ಕಲ್ಪಿಸುವವರ ಮನದಲ್ಲಿ ಮೋಸ; ಒಳಿತನ್ನು ಬಯಸುವವರ ಮನದಲ್ಲಿ ಉಲ್ಲಾಸ.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಜೀವಪ್ರಾಪ್ತಿ; ಅಂಥವನು ಸಂತುಷ್ಟನಾಗಿ ಬಾಳುವನು, ಅವನಿಗೆ ಕೇಡು ಸಂಭವಿಸದು.


ರಾಜಾಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸದು. ಅದನ್ನು ಯಾವಾಗ, ಹೇಗೆ ಪಾಲಿಸಬೇಕೆಂದು ಜ್ಞಾನಿಗೆ ಮನದಟ್ಟಾಗಿರುತ್ತದೆ.


ದುಷ್ಟನಿಗೆ ದಂಡನೆ ಕಟ್ಟಿಟ್ಟ ಬುತ್ತಿ; ಶಿಷ್ಟ ಸಂತಾನಕ್ಕೆ ಸಿಗುವುದು ಮುಕ್ತಿ.


ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು