Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:23 - ಕನ್ನಡ ಸತ್ಯವೇದವು C.L. Bible (BSI)

23 ಜಾಣನು ತನ್ನ ಜ್ಞಾನವನ್ನು ಮುಚ್ಚಿಡುವನು; ಮೂಢನು ತನ್ನ ಮೂರ್ಖತನವನ್ನು ಪ್ರಕಟಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಜಾಣನು ತಿಳಿದದ್ದನ್ನು ಗುಪ್ತಪಡಿಸುವನು; ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಜಾಣನು ತನ್ನ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳುವುದಿಲ್ಲ. ಆದರೆ ಮೂಢನು ದುಡುಕಿ ಮಾತಾಡಿ ತಾನು ಮೂಢನೆಂದು ತೋರಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುತ್ತಾನೆ; ಆದರೆ ಮೂರ್ಖನ ಹೃದಯವು ಮೂರ್ಖತನವನ್ನು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:23
13 ತಿಳಿವುಗಳ ಹೋಲಿಕೆ  

ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಮೂಢನು ಮೂರ್ಖತನವನ್ನು ತೋರ್ಪಡಿಸುತ್ತಾನೆ.


ಚಾಡಿಕೋರನು ಗುಟ್ಟನ್ನು ರಟ್ಟುಮಾಡುವನು; ನಂಬಿಕಸ್ತನು ಅದನ್ನು ಮುಚ್ಚಿ ಮರೆಮಾಡುವನು.


ಬುದ್ಧಿವಂತರು ಜ್ಞಾನದ ಭಂಡಾರಿಗಳು; ಮೂರ್ಖನ ಮಾತುಗಳು ವಿನಾಶದ ಸೋಪಾನಗಳು.


ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.


ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.


ಬುದ್ಧಿತಪ್ಪಿ ತಿರುಗಾಡುವ ಹುಚ್ಚನು ದಾರಿಯಲ್ಲೆಲ್ಲಾ ತನ್ನ ಹುಚ್ಚುತನವನ್ನು ಪ್ರಕಟಮಾಡುತ್ತಾನೆ.


ಮತಿಗೆಟ್ಟವನಿಗೆ ವಿವೇಕವು ಅನಿಷ್ಟ; ಸ್ವಾರ್ಥವನ್ನು ಪ್ರಕಟಿಸುವುದೆಂದರೆ ಅವನಿಗೆ ಬಲು ಇಷ್ಟ.


ಮೂಢನು ತನ್ನ ಕೋಪವನ್ನೆಲ್ಲ ವ್ಯಕ್ತಪಡಿಸುವನು; ಜ್ಞಾನಿ ತನ್ನ ಕೋಪವನ್ನು ತಡೆಹಿಡಿದು ಶಮನಗೊಳ್ಳುವನು.


ಸೌಲನು, “ಕತ್ತೆಗಳು ಸಿಕ್ಕಿದವೆಂದು ತಿಳಿಸಿದನು,” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ಆ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.


ಆಮೇಲೆ ಜೆರುಸಲೇಮಿಗಾಗಿ ಮಾಡತಕ್ಕ ಕಾರ್ಯದ ಬಗ್ಗೆ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾರೆಂದು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆ. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.


ನಾನು ಆವರೆಗೆ ಯೆಹೂದ್ಯರಿಗೂ ಯಾಜಕರಿಗೂ ಶ್ರೀಮಂತರಿಗೂ ಅಧಿಕಾರಿಗಳಿಗೂ ಹಾಗು ಕೆಲಸ ನಡೆಸತಕ್ಕ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ, ನಾನು ಎಲ್ಲಿ ಹೋಗಿದ್ದೆ, ಏನು ಮಾಡಿದೆ ಎಂಬುದು ಅಧಿಕಾರಿಗಳಿಗೆ ಗೊತ್ತಿರಲಿಲ್ಲ.


ಬುದ್ಧಿವಂತರ ಹೃದಯ ಜ್ಞಾನದ ಆಶ್ರಯ; ಬುದ್ಧಿಹೀನರ ಹೃದಯ ಜ್ಞಾನದ ಶೂನ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು