Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:24 - ಕನ್ನಡ ಸತ್ಯವೇದವು C.L. Bible (BSI)

24 ಚೂಟಿಯಾದವನು ಆಳುವನು ಯಜಮಾನನಾಗಿ; ಮೈಗಳ್ಳನು ಬಾಳುವನು ಗುಲಾಮನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಚುರುಕುಗೈಯವನಿಗೆ ರಾಜ್ಯಾಧಿಕಾರ; ಮೈಗಳ್ಳನಿಗೆ ಬಿಟ್ಟಿಯ ಬದುಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕಷ್ಟಪಟ್ಟು ಕೆಲಸ ಮಾಡುವವನು ಅಧಿಪತಿಯಾಗುವನು. ಸೋಮಾರಿಯನ್ನು ಗುಲಾಮನನ್ನಾಗಿ ಮಾಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಚುರುಕು ಕೈಯುಳ್ಳವನು ಆಳುವನು; ಸೋಮಾರಿಗಳು ಗುಲಾಮರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:24
15 ತಿಳಿವುಗಳ ಹೋಲಿಕೆ  

ಮೈಗಳ್ಳನು ಬೇಟೆಯಾಡಿದ್ದನ್ನೂ ಬೇಯಿಸನು; ಚೂಟಿಯಾದವನ ಪಾಲಿಗೆ ಬರುವುದು ಸಂಪತ್ತು.


ಜೋಲುಗೈ ತರುತ್ತದೆ ದಾರಿದ್ರ್ಯ; ಚುರುಕು ಕೈ ತರುತ್ತದೆ ಐಶ್ವರ್ಯ.


ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರ ನಡೆಸುವನು, ಮನೆಮಕ್ಕಳ ಬಾಧ್ಯತೆಯಲ್ಲೂ ಪಾಲುಗಾರನಾಗುವನು.


ಸೋಮಾರಿಗೆ ಹಸಿದಿದ್ದರೂ ಊಟವಿಲ್ಲ; ಶ್ರಮಜೀವಿಗಳಿಗಾದರೋ ಬಲಿಷ್ಠರನ್ನಾಗಿಸುವ ಮೃಷ್ಟಾನ್ನ.


ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


“ಹೊರಗಡೆ ಕಾದಿದೆ ಸಿಂಹ, ಬೀದಿಗೆ ಕಾಲಿಟ್ಟರೆ ತಿಂದುಬಿಡುವುದು!” ಇದು ಮೈಗಳ್ಳನ ಪಿಳ್ಳೆಯ ನೆವ.


ಮೈಗಳ್ಳತನ ಗಾಢನಿದ್ರೆಯಲ್ಲಿ ಮುಳುಗಿಸುವುದು; ಸೋಮಾರಿಯು ಹಸಿವಿನಿಂದ ಬಳಲುವನು.


ಯೌವನಸ್ಥನಾದ ಯಾರೊಬ್ಬಾಮನು ಬಹುಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಜೋಸೆಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.


ಸೂಕ್ತವೆಂದುಕೊಂಡು ತನ್ನ ನಾಡು ವಿಶ್ರಾಂತಿಗೆ, ಸುಖಾನುಭವಕೆ ಬಗ್ಗಿಸುವನು ಬೆನ್ನನು ಹೊರೆ ಹೊರುವುದಕ್ಕೆ, ಬಿಟ್ಟಿಯ ಕೆಲಸಕ್ಕೆ.


ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.


ಯಾರೊಬ್ಬಾಮನು ಹಿಂದಿರುಗಿ ಬಂದು ಇದ್ದಾನೆಂಬ ಸಮಾಚಾರ ಇಸ್ರಯೇಲರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.


ಇಸ್ರಯೇಲರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಅಟ್ಟಿಬಿಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು