Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:25 - ಕನ್ನಡ ಸತ್ಯವೇದವು C.L. Bible (BSI)

25 ಚಿಂತೆ ಮನಸ್ಸನ್ನು ಕುಗ್ಗಿಸುತ್ತದೆ; ಸವಿಮಾತು ಅದನ್ನು ಹಿಗ್ಗಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕಳವಳವು ಮನಸ್ಸನ್ನು ಕುಗ್ಗಿಸುವದು; ಕನಿಕರದ ಮಾತು ಅದನ್ನು ಹಿಗ್ಗಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಚಿಂತೆಯು ಮನುಷ್ಯನ ಸಂತೋಷವನ್ನು ತೆಗೆದುಹಾಕುತ್ತದೆ; ಕನಿಕರದ ಮಾತು ಮನುಷ್ಯನನ್ನು ಸಂತೋಷಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆತಂಕವು ಹೃದಯವನ್ನು ಕುಗ್ಗಿಸುವುದು, ಆದರೆ ಕನಿಕರದ ಮಾತು ಹುರಿದುಂಬಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:25
19 ತಿಳಿವುಗಳ ಹೋಲಿಕೆ  

ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.


ಹರ್ಷಹೃದಯದಿಂದ ಮುಖ ಅರಳುವುದು; ಮನೋವ್ಯಥೆಯಿಂದ ಚೈತನ್ಯ ಕುಂದುವುದು.


ಹರ್ಷ ಹೃದಯ ಒಳ್ಳೆಯ ಔಷಧ; ಕುಗ್ಗಿದ ಮನದಿಂದ ಅಸ್ಥಿಪಂಜರ.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.


ಆಗ ಸೂತ್ರಧಾರಿಯಾದ ದೂತನಿಗೆ ಸರ್ವೇಶ್ವರ ಕರುಣೆಯಿಂದ ಸದುತ್ತರ ಕೊಟ್ಟರು.


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ತೈಲ, ಸುಗಂಧ ದ್ರವ್ಯಗಳು ಮನೋಹರ, ಮಿತ್ರನ ಆದರಣೆ, ಸಲಹೆ ಅತಿ ಮಧುರ.


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು; ಆತ್ಮವೇ ನೊಂದರೆ ಸಹಿಸುವವರಾರು?


ಸಮಯೋಚಿತ ಮಾತು ಬೆಳ್ಳಿ ತಟ್ಟೆಯಲ್ಲಿ ಖಚಿತವಾದ ಬಂಗಾರದ ಹಣ್ಣು.


ಬಾಗಿ ಕುಗ್ಗಿಹೋಗಿರುವೆ ಪ್ರಭು ಬಹಳವಾಗಿ I ದಿನವೆಲ್ಲ ಅಲೆಯುತ್ತಿರುವೆ ದುಃಖಭರಿತನಾಗಿ II


ದಲಿತರ ದಿನಗಳೆಲ್ಲ ದುಃಖಭರಿತ; ಹರ್ಷ ಹೃದಯನಿಗೆ ಸದಾ ಹಬ್ಬದಾನಂದ.


ಆಯಾಯ ಹೃದಯಕ್ಕೆ ಗೊತ್ತು ಅದರ ಗೋಳು; ಅದರ ಸಂತೋಷದಲ್ಲೂ ಪಾಲುಗೊಳ್ಳಲಾಗದು ಬೇರೆಯವರು.


ನೀತಿವಂತ ನೆರೆಯವನಿಗೆ ದಾರಿತೋರಿಸುವನು; ಅನೀತಿವಂತನು ಅವನಿಗೆ ದಾರಿ ತಪ್ಪಿಸುವನು.


ಹಸನ್ಮುಖ ಕಂಡಾಗ ಹೃದಯಕ್ಕೆ ಆನಂದ; ಶುಭಸಮಾಚಾರದಿಂದ ದೇಹಕ್ಕೆ ಉತ್ತೇಜನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು