Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:4 - ಕನ್ನಡ ಸತ್ಯವೇದವು C.L. Bible (BSI)

4 ಗುಣವಂತ ಸತಿ ಗಂಡನ ತಲೆಗೆ ಕಿರೀಟ; ಲಜ್ಜೆಗೆಟ್ಟ ಹೆಂಡತಿ ಆತನ ಎಲುಬಿಗೆ ಕ್ಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ, ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗುಣವಂತೆಯು ಪತಿಯ ತಲೆಗೆ ಕಿರೀಟ; ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಗುಣವಂತಳಾದ ಹೆಂಡತಿಯು ಗಂಡನಿಗೆ ಕಿರೀಟದಂತಿರುವಳು; ಗಂಡನನ್ನು ನಾಚಿಕೆಗೆ ಗುರಿಮಾಡುವ ಹೆಂಡತಿಯು ಗಂಡನ ಎಲುಬಿಗೆ ಕ್ಷಯದಂತಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ಆದರೆ ನಾಚಿಕೆ ಪಡಿಸುವವಳು ಅವನ ಎಲುಬುಗಳಿಗೆ ಕ್ಷಯ ರೋಗದಂತೆ ಇರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:4
16 ತಿಳಿವುಗಳ ಹೋಲಿಕೆ  

ಶಾಂತಗುಣವು ದೇಹಕ್ಕೆ ಆರೋಗ್ಯದಾಯಕವು; ಹೊಟ್ಟೆಕಿಚ್ಚು ಎಲುಬಿಗೆ ಕ್ಷಯ ರೋಗವು.


ಬುದ್ಧಿವಂತೆ ತನ್ನ ಮನೆಯನ್ನು ಕಟ್ಟೆಬ್ಬಿಸುತ್ತಾಳೆ; ಬುದ್ಧಿಹೀನೆ ಅದನ್ನು ಕೈಯಿಂದ ಕೆಡವಿಹಾಕುತ್ತಾಳೆ.


ಆದರೂ ಪ್ರಭುವಿನ ಮಟ್ಟಿಗೆ ಪುರುಷನಿಲ್ಲದೆ ಸ್ತ್ರೀಯು ಇಲ್ಲ; ಸ್ತ್ರೀ ಇಲ್ಲದೆ ಪುರುಷನೂ ಇಲ್ಲ.


ಪುರುಷನು ತಲೆಯ ಮೇಲೆ ಮುಸುಕುಹಾಕಬೇಕಾಗಿಲ್ಲ. ಏಕೆಂದರೆ, ಅವನು ದೇವರ ರೂಪ ಹಾಗೂ ಅವರ ಮಹಿಮೆಯ ಪ್ರತಿಬಿಂಬ. ಸ್ತ್ರೀಯಾದರೋ, ಪುರುಷನ ಮಹಿಮೆಯ ಪ್ರತಿಬಿಂಬ.


ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲು ಕಾಡಿನಲ್ಲಿ ಒಂಟಿಯಾಗಿ ವಾಸಿಸುವುದೇ ಲೇಸು.


ಜಗಳಗಂಟಿಯೊಡನೆ ಮಹಡಿ ಮನೆಯಲ್ಲಿರುವುದಕ್ಕಿಂತ ಗುಡಿಸಲಿನ ಮೂಲೆಯಲ್ಲಿ ಒಂಟಿಯಾಗಿ ವಾಸಿಸುವುದು ಲೇಸು.


ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ಮಗಳೇ, ಭಯಪಡಬೇಡ, ನೀನು ಸುಗುಣಶೀಲೆ ಎಂದು ಊರಿಗೆಲ್ಲಾ ತಿಳಿದಿದೆ; ನೀನು ಕೇಳಿಕೊಂಡದ್ದನ್ನು ನೆರವೇರಿಸುವೆನು.


ಸತ್ಪುರುಷನ ಉದ್ದೇಶ ನ್ಯಾಯಯುತ; ದುಷ್ಟರ ಆಲೋಚನೆ ಮೋಸಭರಿತ.


ಮಡದಿಯನ್ನು ಪಡೆಯುವುದು ಪುಣ್ಯಪಡೆದ ಹಾಗೆ, ಅದು ಸರ್ವೇಶ್ವರನ ಅನುಗ್ರಹಪಡೆದ ಹಾಗೆ.


ಲಜ್ಜೆಗೆಟ್ಟು ನಡೆಯುವ ಸೌಂದರ್ಯವತಿ; ಹಂದಿಯ ಮೂತಿಗೆ ಚಿನ್ನದ ಮೂಗುತಿ.


ಯಾರಿಗೂ ಬೇಡವಾದವಳಾಗಿದ್ದ ಮದುವೆಯಾದ ಚಂಡಿ, ಧರ್ಮಪತ್ನಿಯ ಸ್ಥಾನವನ್ನು ಕಸಿದುಕೊಂಡ ದಾಸಿ.


ಗಂಡನು, “ಗುಣವತಿಯರು ಎಷ್ಟೋಮಂದಿ ಇರುವರು; ಅವರೆಲ್ಲರಿಗಿಂತ ನೀನೆ, ಶ್ರೇಷ್ಠಳು” ಎಂದು ಕೊಂಡಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು