Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:13 - ಕನ್ನಡ ಸತ್ಯವೇದವು C.L. Bible (BSI)

13 ದೇವವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ನಿಷ್ಠೆಯಿಂದ ಪಾಲಿಸುವವನು ಫಲಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 [ದೇವರ] ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸುಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬುದ್ಧಿಮಾತನ್ನು ಕೇಳದವನು ತನಗೆ ತೊಂದರೆಯನ್ನು ಬರಮಾಡಿಕೊಳ್ಳುವನು. ಬುದ್ಧಿವಾದವನ್ನು ಗೌರವಿಸುವವನು ಪ್ರತಿಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:13
26 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಮಾತನ್ನು ತಾತ್ಸಾರ ಮಾಡಿ, ಅವರ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಅಂಥವನಿಗೆ ಬಹಿಷ್ಕಾರ ಹಾಕಲೇಬೇಕು. ಅವನು ತನ್ನ ಪಾಪದ ದುಷ್ಪಲವನ್ನು ಅನುಭವಿಸುವಂತಾಗಬೇಕು.


ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಅತಿ ನೆಮ್ಮದಿಯುಂಟು ನಿನ್ನ ಶಾಸ್ತ್ರಪ್ರಿಯರಿಗೆ I ವಿಘ್ನಕರವಾದುದೇನೂ ಇರದು ಅಂಥವರಿಗೆ II


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II


ಏಕೆಂದರೆ, ಅವರ ಹೃದಯ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ಆಜ್ಞಾವಿಧಿಗಳನ್ನು ಅವರು ಅನುಸರಿಸದೆ ಧಿಕ್ಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು.


ಆದ್ದರಿಂದ ನಾನು ‘ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು’ ಎಂದು ಮರುಭೂಮಿಯಲ್ಲಿ ಪ್ರಮಾಣಮಾಡಿ ಹೇಳಿದೆ.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು; ಮಂಗಳವು ಸತ್ಪುರುಷರಿಗೆ ಸಿಗುವ ಪ್ರತಿಫಲವು.


ನನ್ನ ಬುದ್ಧಿವಾದವನ್ನು ಅಲಕ್ಷ್ಯಮಾಡಿದಿರಿ, ನನ್ನ ತಿದ್ದುಪಾಟನ್ನು ತಳ್ಳಿಬಿಟ್ಟಿರಿ.


ಆಶೀರ್ವದಿಸುವನು ಪ್ರಭು ತನ್ನಲಿ ಭಯಭಕ್ತಿಯುಳ್ಳವರನು I ಚಿಕ್ಕವರು ದೊಡ್ಡವರೆನ್ನದೆ ಭಯಭಕ್ತಿಯುಳ್ಳವರನು II


ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”


ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.


ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”


ಅದಾದ ಮೇಲೆ ಹೋಷಾಯನ ಮಗ ಅಜರ್ಯನು, ಕಾರೇಹನ ಮಗ ಯೋಹಾನಾನನು, ಹಾಗು ಅಹಂಕಾರಿಗಳಾದ ಜನರೆಲ್ಲರು ಅವನಿಗೆ, “ನಿನ್ನ ಮಾತು ಸುಳ್ಳು, ಈಜಿಪ್ಟಿಗೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ.


ನೀನು ಹಾಗು ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರು ಹೇಳಿಕೊಟ್ಟ ಬುದ್ಧಿವಾದಾನುಸಾರ ಅಂಥ ಎಲ್ಲ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ, ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ, ಧರ್ಮಶಾಸ್ತ್ರಕ್ಕನುಸಾರ ನಡೆಯೋಣ.


ಫರೋಹನ ಸೇವಕರಲ್ಲಿ ಕೆಲವರು ಸರ್ವೇಶ್ವರನ ಈ ಮಾತಿಗೆ ಹೆದರಿ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಬೇಗನೆ ಮನೆಗೆ ಬರಮಾಡಿಕೊಂಡರು.


ಕೋರಿದ್ದು ತಡವಾದರೆ ಮನಸ್ಸಿಗೆ ತುಡಿತ; ಕೈಗೂಡಿದ ಇಷ್ಟಾರ್ಥ ಜೀವವೃಕ್ಷ.


ದೈವಾಜ್ಞೆಯನ್ನು ಪಾಲಿಸುವವನು ತನ್ನನ್ನೇ ಕಾಪಾಡಿಕೊಳ್ಳುವನು; ದೈವವಾರ್ತೆಯ ಬಗ್ಗೆ ಅಜಾಗ್ರತನಾಗಿರುವವನು ಸಾಯುವನು.


ತನ್ನ ತಪ್ಪನು ತಾನರಿತುಕೊಳ್ಳುವವನಾರಯ್ಯಾ I ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ II


ದೇವರ ವಾಕ್ಯ ಸ್ಮರಿಸುವವನು ಸುಕ್ಷೇಮದಿಂದ ಬಾಳುವನು; ಸರ್ವೇಶ್ವರನಲ್ಲಿ ಭರವಸೆ ಇಡುವವನು ಭಾಗ್ಯವಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು