Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:15 - ಕನ್ನಡ ಸತ್ಯವೇದವು C.L. Bible (BSI)

15 ಸುಬುದ್ಧಿ ದಯಾಸ್ಪದ; ದುರಾಚಾರ ವಿನಾಶಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸುಬುದ್ಧಿಯು ದಯಾಸ್ಪದವು; ದ್ರೋಹಿಯ ಮಾರ್ಗವು ನಾಶಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರು ಜಾಣನನ್ನು ಗೌರವಿಸುತ್ತಾರೆ. ಆದರೆ ನಂಬಿಕೆಗೆ ಯೋಗ್ಯನಲ್ಲದವನು ತೊಂದರೆಗೆ ಒಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:15
11 ತಿಳಿವುಗಳ ಹೋಲಿಕೆ  

ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ಆಗ ದೇವರಿಗೂ ಮಾನವರಿಗೂ ಪ್ರಿಯನಾಗುವೆ, ದಯೆ ದಾಕ್ಷಿಣ್ಯವನ್ನು ಪಡೆಯುವೆ.


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.


ಸನ್ಮಾರ್ಗವನ್ನು ತೊರೆದವನಿಗೆ ಬರುವ ಶಿಕ್ಷೆ ಕಠಿಣ ಬುದ್ಧಿವಾದವನ್ನು ಕೇಳಲೊಲ್ಲದವನಿಗೆ ಬರುವುದು ಮರಣ.


ಯೇಸು ಬೆಳೆದಂತೆ ಜ್ಞಾನದಲ್ಲಿ ಪ್ರವರ್ಧಿಸುತ್ತಾ ದೇವರಿಗೂ ಮಾನವರಿಗೂ ಅಚ್ಚುಮೆಚ್ಚಾಗುತ್ತಾ ಬಂದರು.


ಜಾಣನಾದ ಸೇವಕನ ಮೇಲೆ ರಾಜನ ಕೃಪೆಯಿರುತ್ತದೆ; ಲಜ್ಜಾಸ್ಪದ ಸೇವಕನ ಮೇಲೆ ಅವನ ಕೋಪ ಎರಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು