Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:16 - ಕನ್ನಡ ಸತ್ಯವೇದವು C.L. Bible (BSI)

16 ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಮೂಢನು ಮೂರ್ಖತನವನ್ನು ತೋರ್ಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳುವಳಿಕೆಯಿಂದ ನಡಿಸುವನು; ಮೂಢನು ತನ್ನ ಮೂರ್ಖತನವನ್ನು ಡಂಭವಾಗಿ ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜ್ಞಾನಿಯು ವಿವೇಚಿಸಿ ಕಾರ್ಯಮಾಡುವನು; ಮೂಢನಾದರೋ ತನ್ನ ಕಾರ್ಯಗಳಿಂದಲೇ ತನ್ನ ಮೂಢತನವನ್ನು ತೋರಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:16
16 ತಿಳಿವುಗಳ ಹೋಲಿಕೆ  

ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.


ಬುದ್ಧಿಹೀನರಾಗಿರದೆ ಪ್ರಭುವಿನ ಚಿತ್ತವೇನೆಂದು ಗ್ರಹಿಸಿಕೊಳ್ಳಿರಿ.


ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.


ಬುದ್ಧಿತಪ್ಪಿ ತಿರುಗಾಡುವ ಹುಚ್ಚನು ದಾರಿಯಲ್ಲೆಲ್ಲಾ ತನ್ನ ಹುಚ್ಚುತನವನ್ನು ಪ್ರಕಟಮಾಡುತ್ತಾನೆ.


ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು.


ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ I ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ II


ಒಡೆಯಾ, ಮಂದಮತಿಯಾದ ಆ ನಾಬಾಲನನ್ನು ತಾವು ಲಕ್ಷಿಸಬೇಡಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಮೂರ್ಖನೇ ಆಗಿರುತ್ತಾನೆ. ನಿಮ್ಮ ದಾಸಿಯಾದ ನಾನು, ತಾವು ಕಳುಹಿಸಿದ ಸೇವಕರನ್ನು ನೋಡಲಿಲ್ಲ.


ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.


ಮತಿಗೆಟ್ಟವನಿಗೆ ವಿವೇಕವು ಅನಿಷ್ಟ; ಸ್ವಾರ್ಥವನ್ನು ಪ್ರಕಟಿಸುವುದೆಂದರೆ ಅವನಿಗೆ ಬಲು ಇಷ್ಟ.


ಬುದ್ಧಿವಂತರ ಹೃದಯ ಜ್ಞಾನದ ಆಶ್ರಯ; ಬುದ್ಧಿಹೀನರ ಹೃದಯ ಜ್ಞಾನದ ಶೂನ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು