Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:18 - ಕನ್ನಡ ಸತ್ಯವೇದವು C.L. Bible (BSI)

18 ಶಿಕ್ಷೆಯನ್ನು ಉಪೇಕ್ಷಿಸುವವನಿಗೆ ಕಾದಿದೆ ಬಡತನ ಹಾಗು ಅವಮಾನ; ಗದರಿಕೆಯನ್ನು ಗಮನಿಸುವವ ಹೊಂದುವನು ಸನ್ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ; ಗದರಿಕೆಯನ್ನು ಗಮನಿಸುವವನಿಗೆ ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಶಿಕ್ಷೆಯನ್ನು ಕಡೆಗಣಿಸುವವನು ಬಡವನಾಗುವನು; ಅವಮಾನ ಹೊಂದುವನು. ತಿದ್ದುಪಡಿಯನ್ನು ಸ್ವೀಕರಿಸಿಕೊಳ್ಳುವವನು ಗೌರವವನ್ನೂ ಐಶ್ವರ್ಯವನ್ನೂ ಪಡೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು; ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:18
15 ತಿಳಿವುಗಳ ಹೋಲಿಕೆ  

ಮೂರ್ಖನು ತಂದೆಯ ಶಿಕ್ಷಣವನ್ನು ನಿರ್ಲಕ್ಷ್ಯ ಮಾಡುತ್ತಾನೆ; ಜಾಣನು ಆತನ ಗದರಿಕೆಯನ್ನೂ ಗಮನಿಸುತ್ತಾನೆ.


ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ದೇವವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ನಿಷ್ಠೆಯಿಂದ ಪಾಲಿಸುವವನು ಫಲಪಡೆಯುವನು.


ಉದಾರಿಯ ಕೃಪೆಕೋರುವವರು ಅನೇಕರು; ದಾನಶೂರನಿಗೆ ಎಲ್ಲರು ಸ್ನೇಹಿತರು.


ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಇಷ್ಟಸಿದ್ಧಿ ಮನಸ್ಸಿಗೆ ಸಿಹಿ; ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.


ನೀತಿವಂತನು ಹೊಟ್ಟೆತುಂಬ ಉಣ್ಣುವನು; ದುಷ್ಟನ ಹೊಟ್ಟೆ ಹಸಿವಿನಿಂದ ಬಳಲುವುದು.


ಅಜ್ಞಾನಿಗಳ ಸ್ತುತಿಗೀತೆಗಿಂತ ಸುಜ್ಞಾನಿಗಳ ಗದರಿಕೆ ಲೇಸು.


ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು