Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:21 - ಕನ್ನಡ ಸತ್ಯವೇದವು C.L. Bible (BSI)

21 ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು; ಮಂಗಳವು ಸತ್ಪುರುಷರಿಗೆ ಸಿಗುವ ಪ್ರತಿಫಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಮಂಗಳವು ಪಾಪಿಗಳನ್ನು ಹಿಂಬಾಲಿಸುವದು; ಮಂಗಳವು ಸಜ್ಜನರಿಗೆ ಪ್ರತಿಫಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪಾಪಿಗಳು ಹೋದಲ್ಲೆಲ್ಲಾ ಕೇಡು ಅವರನ್ನು ಹಿಂಬಾಲಿಸುವುದು. ಸಜ್ಜನರಿಗಾದರೋ ಒಳ್ಳೆಯದೇ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ; ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:21
14 ತಿಳಿವುಗಳ ಹೋಲಿಕೆ  

‘ದುಷ್ಟರ ಕಷ್ಟನಷ್ಟಗಳು ಅನೇಕ I ಪ್ರಭುವನು ನಂಬಿದವರ ಸುತ್ತ ಮರುಕ’ ” II


ದೇವವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ನಿಷ್ಠೆಯಿಂದ ಪಾಲಿಸುವವನು ಫಲಪಡೆಯುವನು.


ಉಳಿಯದಿರಲಿ ನಾಡೊಳು ಚಾಡಿಕೋರರು I ಕೇಡಿಂದ ನಾಶವಾಗಲಿ ಹಿಂಸಕರು II


ನೀವು ಹಾಗೇನಾದರೂ ಮಾಡದೆ ಹೋದರೆ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರಾಗುವಿರಿ. ನಿಮ್ಮನ್ನು ದಂಡಿಸುವ ತನಕ ನಿಮ್ಮ ಪಾಪ ನಿಮ್ಮ ಬೆನ್ನತ್ತಿಬರುವುದೆಂದು ತಿಳಿದಿರಿ.


ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.


ದ್ವೀಪದ ನಿವಾಸಿಗಳು ಪೌಲನ ಕೈಯಿಂದ ನೇತಾಡುತ್ತಿರುವ ಹಾವನ್ನು ಕಂಡು, “ಇವನೊಬ್ಬ ಕೊಲೆಗಡುಕನೇ ಸರಿ; ಇವನು ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ವಿಧಿ ಇವನನ್ನು ಉಳಿಸಲಿಲ್ಲ,” ಎಂದು ತಮ್ಮಲ್ಲೇ ಮಾತನಾಡಿಕೊಂಡರು.


ತಿರುಗುಬಾಣವಾಗಲಿ ಶತ್ರುಗಳೆನಗೆ ಬಯಸುವ ಕೇಡು I ಸತ್ಯಸ್ವರೂಪಿಯಾದ ನೀನು ಅವರನು ನಾಶಮಾಡು II


ಸಜ್ಜನರೇ ಜಗದೊಳು ತಮ್ಮ ಕರ್ಮದ ಫಲವನ್ನು ಅನುಭವಿಸುವಲ್ಲಿ; ಹೇಳಬೇಕೆ ಇನ್ನು ದುರ್ಜನರ, ಹಾಗೂ ಪಾಪಿಗಳ ಪರಿಸ್ಥಿತಿ?


ಯಾರು ಉಪಕಾರಕ್ಕೆ ಅಪಕಾರ ಮಾಡುತ್ತಾರೊ ಅಂಥವರ ಮನೆಯಿಂದ ಕೇಡು ತೊಲಗದು.


ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.


ನೀತಿವಂತನು ಏಳುಸಾರಿ ಬಿದ್ದರೂ ಮತ್ತೆ ಏಳುವನು; ದುಷ್ಟನು ಕೇಡುಬಂದಾಗಲೆ ಕುಸಿದು ಬೀಳುವನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಅಯ್ಯೋ, ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು