Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:25 - ಕನ್ನಡ ಸತ್ಯವೇದವು C.L. Bible (BSI)

25 ನೀತಿವಂತನು ಹೊಟ್ಟೆತುಂಬ ಉಣ್ಣುವನು; ದುಷ್ಟನ ಹೊಟ್ಟೆ ಹಸಿವಿನಿಂದ ಬಳಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಶಿಷ್ಟನು ಹೊಟ್ಟೆತುಂಬಾ ಉಣ್ಣುವನು, ದುಷ್ಟನ ಹೊಟ್ಟೆ ಹಸಿದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಶಿಷ್ಟನು ಹೊಟ್ಟೆತುಂಬಾ ಉಣ್ಣುವನು; ದುಷ್ಟನ ಹೊಟ್ಟೆ ಹಸಿದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಶಿಷ್ಟನು ತೃಪ್ತಿಯಾಗುವಷ್ಟು ತಿನ್ನುವನು. ಆದರೆ ದುಷ್ಟನು ಹಸಿವೆಯಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:25
17 ತಿಳಿವುಗಳ ಹೋಲಿಕೆ  

ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II


ಸತ್ಪುರುಷನನ್ನು ಸರ್ವೇಶ್ವರ ಹಸಿವೆಗೊಳಿಸನು; ದುಷ್ಟನ ಆಶೆಯನ್ನಾತ ಭಂಗಪಡಿಸುವನು.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ಬಡತನ ನಿನ್ನ ಮೇಲೆರಗುವುದು ದಾರಿಗಳ್ಳನಂತೆ; ಅಭಾವ ನಿನ್ನ ಮೇಲೆ ಬೀಳುವುದು ಪಂಜುಗಳ್ಳನಂತೆ.


ಕ್ಷಯಿಸಿಹೋಗುವರವರು ಕ್ಷಾಮಡಾಮರದಿಂದ ಸಾಯುವರು ಶಾಪದಿಂದ, ಅಂಟುರೋಗಗಳಿಂದ, ನಾ ಕಳುಹಿಸುವ ಕಾಡುಮೃಗ, ವಿಷಸರ್ಪಗಳಿಂದ.


ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.


ಆಗ ಬಡತನ ಎರಗುವುದು ದಾರಿಗಳ್ಳನಂತೆ; ಕೊರತೆಯು ನಿನ್ನ ಮೇಲೆ ಬೀಳುವುದು ಪಂಜುಗಳ್ಳನಂತೆ.


ದುರುಳರ ವಿಪುಲ ಆಸ್ತಿಪಾಸ್ತಿಗಿಂತಲು I ಸತ್ಯವಂತರ ಬಡತನವೆನಿತೊ ಮಿಗಿಲು II


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;


ಹೀಗೆ ಅವನು ಎಲ್ಲವನ್ನು ಹಾಳುಮಾಡಿಕೊಂಡಮೇಲೆ ಆ ದೇಶದಾದ್ಯಂತ ಘೋರವಾದ ಕ್ಷಾಮ ತಲೆದೋರಿತು.


ಒಳ್ಳೆಯವುಗಳಿಂದ ತುಂಬಿಸುವನು ನನ್ನ ಜೀವಮಾನವನು I ಪುನರುಜ್ಜೀವನಗೊಳಿಸುವನು ಗರುಡನಂತೆ ನನ್ನ ಯೌವನವನು II


ಇದಕ್ಕೊದಗಿಸುವೆನು ಧಾರಾಳ ಸಿರಿಸಂಪತ್ತನು I ಅನ್ನದಿಂದ ತೃಪ್ತಿಪಡಿಸುವೆನಿಲ್ಲಿಯ ದಲಿತರನು II


ಶಿಕ್ಷೆಯನ್ನು ಉಪೇಕ್ಷಿಸುವವನಿಗೆ ಕಾದಿದೆ ಬಡತನ ಹಾಗು ಅವಮಾನ; ಗದರಿಕೆಯನ್ನು ಗಮನಿಸುವವ ಹೊಂದುವನು ಸನ್ಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು