Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:15 - ಕನ್ನಡ ಸತ್ಯವೇದವು C.L. Bible (BSI)

15 ಪೆದ್ದನು ಕಿವಿಗೆ ಬಿದ್ದುದೆಲ್ಲವನ್ನು ನಂಬಿಬಿಡುವನು; ಜಾಣನು ವಿವೇಚನೆ ಮಾಡಿ ಹೆಜ್ಜೆ ಇಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮೂಢನು ಯಾವ ಮಾತನ್ನಾದರೂ ನಂಬುವನು; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮೂಢನು ತಾನು ಕೇಳಿದ್ದನ್ನೆಲ್ಲ ನಂಬುವನು. ಆದರೆ ಜಾಣನು ಪ್ರತಿಯೊಂದರ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಿವಿಲ್ಲದವರು ಯಾವ ಮಾತನ್ನಾದರೂ ನಂಬುತ್ತಾರೆ, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:15
16 ತಿಳಿವುಗಳ ಹೋಲಿಕೆ  

ಬುದ್ಧಿಹೀನರಾಗಿರದೆ ಪ್ರಭುವಿನ ಚಿತ್ತವೇನೆಂದು ಗ್ರಹಿಸಿಕೊಳ್ಳಿರಿ.


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.


ನೀ ನಡೆವ ದಾರಿ ಸಮನಾಗಿರಲಿ, ನೀ ಕೈಗೊಳ್ಳುವ ಹಾದಿ ದೃಢವಾಗಿರಲಿ.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ತಾನೊಬ್ಬ ಪ್ರವಾದಿಯೆಂದು ನಟಿಸುತ್ತಿದ್ದ ಯೆಹೂದ್ಯ ಅವನು; ಮಾತ್ರವಲ್ಲ, ಅಲ್ಲಿಯ ರಾಜ್ಯಪಾಲನಾಗಿದ್ದ ಸೆರ್ಗ್ಯಪೌಲನ ಪರಿವಾರಕ್ಕೆ ಸೇರಿದ್ದನು. ಈ ರಾಜ್ಯಪಾಲನೊಬ್ಬ ಜ್ಞಾನಿ. ಇವನು ದೇವರವಾಕ್ಯವನ್ನು ಕೇಳಲಪೇಕ್ಷಿಸಿ ಬಾರ್ನಬ ಮತ್ತು ಸೌಲರನ್ನು ಆಹ್ವಾನಿಸಿದನು.


ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.


ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.


ಕೆಟ್ಟವನು ತನ್ನ ಕರ್ಮದ ಕಹಿಫಲದಿಂದ ತಿಂದು ತೇಗುವನು; ಒಳ್ಳೆಯವನು ತನ್ನ ಕಾರ್ಯದ ಸತ್ಫಲದಿಂದ ತೃಪ್ತನಾಗುವನು.


ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.


ಕೆಡುಕನು ಕೆಟ್ಟತುಟಿ ಆಡುವುದನ್ನು ಗಮನಿಸುತ್ತಾನೆ; ಸುಳ್ಳುಗಾರ ನಷ್ಟಮಾಡುವ ನಾಲಿಗೆಗೆ ಕಿವಿಗೊಡುತ್ತಾನೆ.


ದಾವೀದನು ಈ ವರ್ತಮಾನ ತಂದ ಯುವಕನಿಗೆ, “ಸೌಲನೂ ಅವನ ಮಗ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು?” ಎಂದು ಪ್ರಶ್ನಿಸಿದನು.


ಬತ್ಷೆಬೆ, “ಒಳ್ಳೇದು, ನಾನು ನಿನ್ನ ಪರವಾಗಿ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ,” ಎಂದು ಹೇಳಿದಳು.


ಅವರು ನಾಲ್ಕುಸಾರಿ ಅದೇ ರೀತಿ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರಕೊಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು