Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:2 - ಕನ್ನಡ ಸತ್ಯವೇದವು C.L. Bible (BSI)

2 ಸನ್ಮಾರ್ಗಿಯು ಸರ್ವೇಶ್ವರನಿಗೆ ಭಯಪಡುತ್ತಾನೆ; ದುರ್ಮಾರ್ಗಿಯು ಆತನನ್ನು ಅಸಡ್ಡೆಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು; ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯು ಆತನನ್ನು ಕಡೆಗಣಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ತನ್ನ ಯಥಾರ್ಥತೆಯಲ್ಲಿ ನಡೆಯುವವನು ಯೆಹೋವ ದೇವರಿಗೆ ಭಯಪಡುತ್ತಾನೆ, ಆದರೆ ಅವರನ್ನು ತಿರಸ್ಕರಿಸುವವರು ತಮ್ಮ ಮಾರ್ಗಗಳಲ್ಲಿ ಮೋಸ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:2
24 ತಿಳಿವುಗಳ ಹೋಲಿಕೆ  

ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


ದುರ್ಮಾರ್ಗಿಯಾದ ಧನವಂತನಿಗಿಂತ ನಿರ್ದೋಷಿಯಾಗಿ ನಡೆವ ದರಿದ್ರನೇ ಲೇಸು.


ಅಲ್ಲೆಲೂಯ I ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು I ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು II


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ನಿರ್ದೋಷ, ನಿಷ್ಕಪಟ ನಡತೆ ನನಗೆ ರಕ್ಷೆ I ನೀನೆ ಪ್ರಭು ನನಗಿರುವ ದೃಢ ನಿರೀಕ್ಷೆ II


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.


ಸಜ್ಜನರ ರಾಜಮಾರ್ಗ ಹಾನಿಗೆ ದೂರ; ಸನ್ನಡತೆಯುಳ್ಳವ ಪ್ರಾಣಸಂರಕ್ಷಕ.


ನೆರೆಯವನನ್ನು ತೃಣೀಕರಿಸುವವನು ಬುದ್ಧಿಹೀನ; ವಿವೇಕಿಯು ಅದರ ಬಗ್ಗೆ ತಾಳುವನು ಮೌನ.


ಅವರ ಮಾರ್ಗ ಅಂಕು, ಅವರ ನಡತೆ ಡೊಂಕು.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.


ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.


ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ.


ಆ ಕಾಲದ ಪದ್ಧತಿಯನ್ನು ಇಂದಿಗೂ ಮುಂದುವರಿಸುತ್ತಿದ್ದಾರೆ. ಸರ್ವೇಶ್ವರನಲ್ಲಿ ಭಯಭಕ್ತಿ ಇಸ್ರಯೇಲರಿಗಿಲ್ಲ; ಅವರಿಂದಲೇ ಇಸ್ರಯೇಲನೆಂಬ ಹೆಸರು ಹೊಂದಿದ ಯಕೋಬನ ಸಂತಾನದವರಿಗೆ ಕೊಡಲಾದ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ಅವರು ಅನುಸರಿಸಲಿಲ್ಲ.


ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು