Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:21 - ಕನ್ನಡ ಸತ್ಯವೇದವು C.L. Bible (BSI)

21 ಹಸಿದವನನ್ನು ತಿರಸ್ಕರಿಸುವವನು ಪಾಪಿಷ್ಠನು; ದಲಿತರಿಗೆ ದಯೆ ತೋರಿಸುವವನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೆರೆಯವನನ್ನು ತಿರಸ್ಕರಿಸುವವನು ದೋಷಿ; ದರಿದ್ರನನ್ನು ಕನಿಕರಿಸುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ, ಬಡವರ ಮೇಲೆ ಕನಿಕರ ತೋರಿಸುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:21
28 ತಿಳಿವುಗಳ ಹೋಲಿಕೆ  

ಬಡವರಿಗೆ ಕೊಡುವವನು ಕೊರತೆಪಡನು; ಅವರನ್ನು ಕಂಡೂ ಕಾಣದಂತೆ ಇರುವವನು ಬಹುಶಾಪಗ್ರಸ್ಥನು.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ನೆರೆಯವನನ್ನು ತೃಣೀಕರಿಸುವವನು ಬುದ್ಧಿಹೀನ; ವಿವೇಕಿಯು ಅದರ ಬಗ್ಗೆ ತಾಳುವನು ಮೌನ.


ಬಡವರನ್ನು ಗೇಲಿಮಾಡುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ಪರರ ಕಷ್ಟದುಃಖಗಳನ್ನು ನೋಡಿ ಹಿಗ್ಗುವವನು ದಂಡನೆಗೆ ಗುರಿಯಾಗುತ್ತಾನೆ.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.


ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ದುರಾಚಾರವಿದ್ದಲ್ಲಿ ತಾತ್ಸಾರ; ಮಾನ ಕಳೆದುಕೊಂಡಲ್ಲಿ ಧಿಕ್ಕಾರ.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ I ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ II


ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II


ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು:


ದುರಾತ್ಮನ ಮನಸ್ಸು ಕೇಡಿನ ಮೇಲೆ; ದಯೆತೋರಿಸನಾತ ನೆರೆಯವನ ಮೇಲೆ.


ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.


ಬಿಡುಗಡೆಯಾಗುವ ಏಳನೆಯ ವರ್ಷ ಸಮೀಪಿಸಿಬಿಟ್ಟಿತು ಎಂದು ನೀಚವಾದ ಆಲೋಚನೆಮಾಡಿ, ಬಡ ಸಹೋದರನ ಬಗ್ಗೆ ಮೋರೆ ಕರ್ರಗೆಮಾಡಿಕೊಂಡು, ಅವನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಸಹಾಯವನ್ನು ನಿರಾಕರಿಸಿದರೆ, ಅವನು ನಿಮ್ಮ ಬಗ್ಗೆ ಸರ್ವೇಶ್ವರನಿಗೆ ಮೊರೆ ಇಡುವನು; ಆಗ ನೀವು ದೋಷಿಗಳಾಗುತ್ತೀರಿ.


ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು