Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:22 - ಕನ್ನಡ ಸತ್ಯವೇದವು C.L. Bible (BSI)

22 ಕೆಟ್ಟದ್ದನ್ನು ಕಲ್ಪಿಸುವವರು ಮಾರ್ಗಭ್ರಷ್ಟರು; ಒಳ್ಳೆಯದನ್ನು ಕಲ್ಪಿಸುವವರು ಮರ್ಯಾದಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ; ಸುಯುಕ್ತಿಯುಳ್ಳವರು ಪ್ರೀತಿಸತ್ಯತೆಗಳಿಗೆ ಪಾತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುರ್ಮಾರ್ಗಿಯು ದಾರಿ ತಪ್ಪುವನು. ಒಳ್ಳೆಯದನ್ನು ಮಾಡಲು ಪ್ರಯತ್ನಿಸುವವನು ಪ್ರೀತಿಗೂ ಭರವಸೆಗೂ ಪಾತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕೆಟ್ಟದ್ದನ್ನು ಕಲ್ಪಿಸುವವರು ದಾರಿ ತಪ್ಪುವುದಿಲ್ಲವೇ? ಆದರೆ ಒಳ್ಳೆಯದನ್ನು ಕಲ್ಪಿಸುವವರಿಗೆ ಪ್ರೀತಿ ಸತ್ಯತೆಯು ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:22
19 ತಿಳಿವುಗಳ ಹೋಲಿಕೆ  

ಒಳ್ಳೆಯವನು ಸರ್ವೇಶ್ವರನ ದಯೆಯನ್ನು ಗಳಿಸುವನು; ಕೆಟ್ಟವನ ಕುಯುಕ್ತಿ ದೈವಖಂಡನೆಯನ್ನು ಪಡೆಯುವುದು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.


ಅತಿಯಾಸೆ ಗತಿಕೇಡು; ಇದ್ದೂ ಇಲ್ಲವೆನ್ನುವವನಿಗಿಂತ ಏನೂ ಇಲ್ಲದವನೆ ಲೇಸು.


ಮುಂಗೋಪಿಗೆ ಬುದ್ಧಿಮಟ್ಟುಂಟು; ವಿವೇಕಿಗಾದರೊ ಸಹನೆಯುಂಟು.


ಕೇಡನ್ನು ಬಗೆಯಬೇಡ ನೆರೆಯವನಿಗೆ, ಪಕ್ಕದಲ್ಲೆ ನಂಬಿಕೆಯಿಂದ ವಾಸಿಸುವವನಿಗೆ.


ದೇವರ ಸಾನ್ನಿಧ್ಯದಲಿ ಆತನು ಸದಾ ಸಾಮ್ರಾಜ್ಯವಾಳಲಿ I ನಿನ್ನಯ ಪ್ರೀತಿ ಸತ್ಯತೆಗಳು ಆತನಿಗೆ ಬೆಂಗಾವಲಾಗಿರಲಿ II


ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ I ಆತನ ವಿಧಿ ನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ II


‘ನೀನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.


ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II


ಪ್ರೀತಿ ಸತ್ಯತೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಪಟ್ಟಿಯಾಗಿರಲಿ, ಹೃದಯದಹಲಗೆಯಲ್ಲಿ ಲಿಖಿತವಾಗಿರಲಿ.


ದುಡಿಮೆಯಿಂದ ಸದಾ ಲಾಭವುಂಟು; ಬರಿ ಮಾತಿನಿಂದ ಬಡತನ ಬರುವುದುಂಟು.


ಕೇಡನ್ನು ಯೋಚಿಸುವವನು ತುಂಟನು ಎನಿಸಿಕೊಳ್ಳುವನು.


ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು.


ಅವನ ಮನದಲ್ಲಿರುವುದು ಮೂರ್ಖತನ; ಅವನು ಸತತ ಕಲ್ಪಿಸುವುದು ಕೆಡುಕುತನ. ಅವನು ಬಿತ್ತನೆ ಮಾಡುವುದು ಕಾಳಗ, ಕದನ.


ನೀತಿವಂತ ನೆರೆಯವನಿಗೆ ದಾರಿತೋರಿಸುವನು; ಅನೀತಿವಂತನು ಅವನಿಗೆ ದಾರಿ ತಪ್ಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು