Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:23 - ಕನ್ನಡ ಸತ್ಯವೇದವು C.L. Bible (BSI)

23 ದುಡಿಮೆಯಿಂದ ಸದಾ ಲಾಭವುಂಟು; ಬರಿ ಮಾತಿನಿಂದ ಬಡತನ ಬರುವುದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಶ್ರಮೆಯಿಂದ ಸಮೃದ್ಧಿ; ಹರಟೆಯಿಂದ ಕೊರತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕಷ್ಟಪಟ್ಟು ದುಡಿದರೆ, ಸಮೃದ್ಧಿಯಿರುವುದು. ಕೇವಲ ಮಾತಾಡಿದರೆ ಬಡತನ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಎಲ್ಲಾ ಪ್ರಯಾಸದಲ್ಲಿ ಲಾಭವಿದೆ, ಹರಟೆ ಮಾತು ಬಡತನಕ್ಕೆ ಮಾತ್ರ ದಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:23
12 ತಿಳಿವುಗಳ ಹೋಲಿಕೆ  

ದುಡಿದು ಹೊಲ ಗೇಯುವವನಿಗೆ ಹೊಟ್ಟೆ ತುಂಬ ಅನ್ನ; ವ್ಯರ್ಥಕಾರ್ಯಗಳಲ್ಲಿ ಆಸಕ್ತನಾದವನಿಗೆ ಬೇಕಾದಷ್ಟು ಬಡತನ.


ಚೂಟಿಯಾದವನು ಆಳುವನು ಯಜಮಾನನಾಗಿ; ಮೈಗಳ್ಳನು ಬಾಳುವನು ಗುಲಾಮನಾಗಿ.


ಚಿಂತೆ ಹೆಚ್ಚಾದರೆ ಕನಸು ಕಾಣಿಸಿಕೊಳ್ಳುತ್ತದೆ. ಮಾತು ಹೆಚ್ಚಾದರೆ ಹುಚ್ಚುತನ ಹೊರಬರುತ್ತದೆ.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಕಣ್ಣು ಮಿಟುಕಿಸುವವನು ತೊಂದರೆಗೆ ಕಾರಣನು; ನೆಟ್ಟಗೆ ಗದರಿಸುವವನು ಸಮಾಧಾನಕರನು.


ಇದಲ್ಲದೆ ಅವರು ಮನೆಮನೆಗಳನ್ನು ಸುತ್ತುತ್ತಾ ಅಲೆದಾಡುತ್ತಾ ಹರಟೆಮಲ್ಲರೂ ಸೋಮಾರಿಗಳೂ ಆಗಬಹುದು. ಇತರರ ವಿಷಯಗಳಲ್ಲಿ ತಲೆಹಾಕಬಹುದು.


ಕೆಟ್ಟದ್ದನ್ನು ಕಲ್ಪಿಸುವವರು ಮಾರ್ಗಭ್ರಷ್ಟರು; ಒಳ್ಳೆಯದನ್ನು ಕಲ್ಪಿಸುವವರು ಮರ್ಯಾದಸ್ಥರು.


ಬುದ್ಧಿವಂತರ ಕಿರೀಟ ಅವರ ಜ್ಞಾನವೇ; ದಡ್ಡರ ಶಿರಮುಕುಟ ಅವರ ದಡ್ಡತನವೆ.


ಸುರಂಗಗಳನ್ನು ಕೊರೆಯುತ್ತಾನೆ ಬಂಡೆಗಳಲಿ ಅಮೂಲ್ಯವಾದ ವಸ್ತುಗಳನ್ನು ಕಾಣುತ್ತಾನಲ್ಲಿ.


ಕಷ್ಟಪಟ್ಟು ಮಾಡುವ ದುಡಿಮೆಯಿಂದ ಒಬ್ಬನಿಗೆ ಸಿಗುವ ಲಾಭವಾದರೂ ಏನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು