Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:28 - ಕನ್ನಡ ಸತ್ಯವೇದವು C.L. Bible (BSI)

28 ಪ್ರಜೆಗಳ ಬಹುಸಂಖ್ಯೆ ಅರಸನಿಗೆ ಅತಿ ಹಿರಿಮೆ; ಪ್ರಜೆಗಳ ಕೊರತೆ ರಾಜಕುವರನಿಗೂ ಅಂಜಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಪ್ರಜೆಗಳ ವೃದ್ಧಿ ರಾಜನ ಮಹಿಮೆ; ಪ್ರಜೆಗಳ ಕ್ಷಯ ಪ್ರಭುವಿಗೆ ಭಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಧಿಕ ಜನಸಂಖ್ಯೆಯು ರಾಜನಿಗೆ ಗೌರವ. ಪ್ರಜೆಗಳೇ ಇಲ್ಲದಿದ್ದರೆ ರಾಜನಿಗೆ ಬೆಲೆಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಜನಸಮೂಹದಲ್ಲಿ ಅರಸನ ಘನತೆ ಇದೆ. ಆದರೆ ಜನರ ಕೊರತೆಯಲ್ಲಿ ರಾಜಪುತ್ರನ ನಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:28
11 ತಿಳಿವುಗಳ ಹೋಲಿಕೆ  

ಯೆಹೋವಾಹಾಜನಿಗೆ ಐವತ್ತುಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದಿದ್ದರು. ಸಿರಿಯಾದವರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ, ಕಣದ ಧೂಳಿಪಟದಂತೆ ಮಾಡಿಬಿಟ್ಟನು.


ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು,” ಎಂದು ಆಜ್ಞೆಮಾಡಿದನು.


ಇಸ್ರಯೇಲರು ಸಹ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಂಡು ಅವರಿಗೆ ವಿರುದ್ಧ ಕೂಡಿಬಂದರು. ಸಿರಿಯಾದವರು ನಾಡಿನಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿದ್ದ ಇಸ್ರಯೇಲರು ಅವರ ಎದುರಿನಲ್ಲೇ ಪಾಳೆಯಮಾಡಿಕೊಂಡರು.


ಈಜಿಪ್ಟರು ಅವರಿಗೆ ಎಷ್ಟು ಕಿರುಕುಳ ಕೊಡುತ್ತಿದ್ದರೋ ಅಷ್ಟೂ ಹೆಚ್ಚಿ ಹರಡಿಕೊಳ್ಳುತ್ತಿದ್ದರು.


ಈಗ ಎದ್ದು ಹೋಗಿ ನಿಮ್ಮ ಸೇವಕರನ್ನು ದಯಾಭಾವದಿಂದ ಮಾತಾಡಿಸಿ, ನೀವು ಹೀಗೆ ಮಾಡದಿದ್ದರೆ ಸರ್ವೇಶ್ವರನಾಣೆ, ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿಮ್ಮನ್ನು ಬಿಟ್ಟುಹೋಗುವರು. ಯೌವನಕಾಲದಿಂದ ಈವರೆಗೆ ನಿಮಗೆ ಬಂದೊದಗಿದ ಕೇಡುಗಳಲ್ಲಿ ಇದು ದೊಡ್ಡದಾಗುವುದು,” ಎಂದು ಹೇಳಿದನು.


ಸರ್ವೇಶ್ವರನಲ್ಲಿ ಭಯಭಕ್ತಿಯು ಜೀವಜಲದ ಚಿಲುಮೆಯು; ಮರಣಪಾಶದಿಂದ ತಪ್ಪಿಸಿಕೊಳ್ಳಲು ಅದುವೆ ಸಾಧನವು.


ದೀರ್ಘಶಾಂತನು ಬಹು ಬುದ್ಧಿವಂತನು; ಉಗ್ರಕೋಪಿ ಎತ್ತಿಹಿಡಿವನು ಮೂರ್ಖತನವನ್ನು.


ಆಗ ಯೋವಾಬನು, “ನನ್ನ ಒಡೆಯರಾದ ತಮ್ಮ ಆಯುಷ್ಕಾಲದಲ್ಲೇ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯರಾದ ಅರಸರು ಈ ಕಾರ್ಯಕ್ಕೆ ಮನಸ್ಸುಮಾಡಿದ್ದೇಕೆ?” ಎಂದನು.


“ಜೆರುಸಲೇಮ್, ಕಣ್ಣೆತ್ತಿ ನೋಡು, ಉತ್ತರದಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ಅಂದವಾದ ಆ ನಿನ್ನ ಹಿಂಡು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು