Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:29 - ಕನ್ನಡ ಸತ್ಯವೇದವು C.L. Bible (BSI)

29 ದೀರ್ಘಶಾಂತನು ಬಹು ಬುದ್ಧಿವಂತನು; ಉಗ್ರಕೋಪಿ ಎತ್ತಿಹಿಡಿವನು ಮೂರ್ಖತನವನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ತಾಳ್ಮೆಯುಳ್ಳವನು ಬಹು ವಿವೇಕಿ, ಮುಂಗೋಪಿಯು ಮೂರ್ಖತನವನ್ನು ಎತ್ತಿಹಿಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:29
20 ತಿಳಿವುಗಳ ಹೋಲಿಕೆ  

ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.


ತವಕಬೇಡ ಕೋಪಮಾಡಲಿಕ್ಕೆ; ಕೋಪಕ್ಕೆ ನೆಲೆ ಮೂಢನ ಎದೆ.


ಮುಂಗೋಪಿಗೆ ಬುದ್ಧಿಮಟ್ಟುಂಟು; ವಿವೇಕಿಗಾದರೊ ಸಹನೆಯುಂಟು.


ಉಗ್ರಕೋಪಿ ವ್ಯಾಜ್ಯವೆಬ್ಬಿಸುತ್ತಾನೆ; ದೀರ್ಘಶಾಂತನು ಜಗಳ ತೀರಿಸುತ್ತಾನೆ.


ವಿವೇಕಿಯು ಸಿಟ್ಟುಗೊಳ್ಳಲು ತಡಮಾಡುತ್ತಾನೆ; ತಪ್ಪನ್ನು ಕ್ಷಮಿಸುವುದೆಂದರೆ ಅವನಿಗೆ ಹೆಮ್ಮೆ.


ದೀರ್ಘಶಾಂತನು ಪರಾಕ್ರಮಶಾಲಿಗಿಂತ ಶ್ರೇಷ್ಠ; ತನ್ನನ್ನು ತಾನೆ ಗೆದ್ದವನು ಪಟ್ಟಣ ಗೆದ್ದವನಿಗಿಂತ ಬಲಿಷ್ಠ.


ಆತ್ಮಸ್ವಾಧೀನವಲ್ಲದ ಮನುಷ್ಯ ಗೋಡೆಬಿದ್ದು ಕಾವಲಿಲ್ಲದ ಹಾಳೂರು.


ಅವರು ಆಡಿದ ಮಾತು ಸರ್ವೇಶ್ವರನಿಗೆ ಮುಟ್ಟಿತು. ಮೋಶೆ ಸಾಧುಮನುಷ್ಯ. ನರಮಾನವರಲ್ಲೆಲ್ಲಾ ಅತ್ಯಂತ ಸಾಧು.


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ಅದು ಯಾವುದೆಂದರೆ, ಮೂಢರನ್ನು ಮಹಾಪದವಿಗೆ ಏರಿಸುತ್ತಾರೆ; ಘನವಂತರನ್ನು ಹೀನಸ್ಥಿತಿಯಲ್ಲಿ ಇರಿಸುತ್ತಾರೆ.


ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು.


ಜ್ಞಾನವೆಂಬಾಕೆಯನ್ನು ಶ್ರೇಷ್ಠಳೆಂದು ಭಾವಿಸಿದೆಯಾದರೆ, ಆಕೆ ನಿನ್ನನ್ನು ಸನ್ಮಾನಿಸುವಳು. ನೀನು ಅವಳನ್ನು ಅಪ್ಪಿಕೊಂಡೆಯಾದರೆ, ಆಕೆ ನಿನ್ನನ್ನು ಘನಪಡಿಸುವಳು.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ಪ್ರಜೆಗಳ ಬಹುಸಂಖ್ಯೆ ಅರಸನಿಗೆ ಅತಿ ಹಿರಿಮೆ; ಪ್ರಜೆಗಳ ಕೊರತೆ ರಾಜಕುವರನಿಗೂ ಅಂಜಿಕೆ.


ಹಿಡಿದು ಮಾತಾಡುವವನು ಜ್ಞಾನಿ; ಶಾಂತ ಗುಣವುಳ್ಳವನು ವಿವೇಕಿ.


ಆದಿಗಿಂತ ಅಂತ್ಯ ಲೇಸು; ಗರ್ವಕ್ಕಿಂತ ತಾಳ್ಮೆ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು