Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:3 - ಕನ್ನಡ ಸತ್ಯವೇದವು C.L. Bible (BSI)

3 ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವುದು; ಜ್ಞಾನಿಗಳ ವಚನಗಳು ಅವರನ್ನು ಕಾಪಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವದು; ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೂಢನ ಮಾತುಗಳು ಅವನಿಗೇ ತೊಂದರೆಯನ್ನು ಉಂಟುಮಾಡುತ್ತವೆ. ಜ್ಞಾನಿಯ ಮಾತುಗಳಾದರೋ ಅವನನ್ನು ಕಾಪಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬುದ್ಧಿಹೀನನ ಬಾಯಿಯಲ್ಲಿ ಗರ್ವದ ಅಂಕುರವಿದೆ, ಆದರೆ ಜ್ಞಾನವಂತರ ತುಟಿಗಳು ಅವರನ್ನು ಕಾಪಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:3
21 ತಿಳಿವುಗಳ ಹೋಲಿಕೆ  

ದುರುಳರ ಮಾತು ಜೀವಕ್ಕೆ ಉರುಳು; ಸಜ್ಜನರ ಮಾತು ಪ್ರಾಣಕ್ಕೆ ನೆರವು.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಅದರ ತಲೆಯ ಮೇಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ,


ಅತ್ಯಾಸೆಪಡುವವನು ಜಗಳವೆಬ್ಬಿಸುವನು; ಸರ್ವೇಶ್ವರನಲ್ಲಿ ಭರವಸೆಯಿಟ್ಟವನು ಬಲಿಷ್ಠನು.


ಕೆಟ್ಟತನವನ್ನು ಬಿತ್ತುವವನು ಕೇಡನ್ನೆ ಕೊಯ್ಯುವನು; ಅವನ ಸಿಟ್ಟು ಅವನನ್ನೆ ಸುಟ್ಟುಬಿಡುವುದು.


ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು.


ಕಲಹವೆಬ್ಬಿಸುವುದು ಬುದ್ಧಿಹೀನನ ತುಟಿ; ಪೆಟ್ಟಿಗಾಗಿ ಕೂಗಿಕೊಳ್ಳುವುದು ಅವನ ಬಾಯಿ.


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ಕಪಟವಾಡುವ ತುಟಿಗಳನು ಪ್ರಭು ಕಡಿದುಬಿಡಲಿ I ಬಡಾಯಿಕೊಚ್ಚುವ ಜಿಹ್ವೆಯನು ಕತ್ತರಿಸಿಬಿಡಲಿ II


ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ ಪರಿವಿನಾಶ ಬಂದರೂ ನೀನು ಹೆದರದಿರುವೆ.


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ಸೇದಿಹೋಗಲಿ ಸಜ್ಜನರ ವಿರುದ್ಧ ಸುಳ್ಳಾಡುವ ನಾಲಿಗೆ I ಬಿದ್ದುಹೋಗಲಿ, ಸೊಕ್ಕಿನಿಂದವರನು ಧಿಕ್ಕರಿಸುವ ನಾಲಿಗೆ II


ಎತ್ತುಗಳಿಲ್ಲದಿರುವಾಗ ಗೋದಲಿ ಶುದ್ಧ; ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ಉತ್ಪನ್ನ.


ಬಾಯಿಯನ್ನು ಕಾಯುವವನು ಜೀವವನ್ನು ಕಾಯುವನು; ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.


ಬುದ್ಧಿಹೀನನಿಗೆ ಬಾಯೇ ನಾಶ, ತುಟಿಗಳೇ ಅವನಿಗೆ ಪಾಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು