Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:32 - ಕನ್ನಡ ಸತ್ಯವೇದವು C.L. Bible (BSI)

32 ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:32
29 ತಿಳಿವುಗಳ ಹೋಲಿಕೆ  

ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.


ಆದ್ದರಿಂದ ಈ ದೇಹವನ್ನು ತ್ಯಜಿಸಿ, ಪ್ರಭುವನ್ನೇ ನೆಚ್ಚಿ ನೆಲಸುವುದು ಲೇಸೆಂದು ಧೈರ್ಯದಿಂದ ಹೇಳುತ್ತೇವೆ.


ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.


ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.


ನೀತಿವಂತನು ಏಳುಸಾರಿ ಬಿದ್ದರೂ ಮತ್ತೆ ಏಳುವನು; ದುಷ್ಟನು ಕೇಡುಬಂದಾಗಲೆ ಕುಸಿದು ಬೀಳುವನು.


ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II


ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.


ನನಗಂತೂ ಬದುಕುವುದೆಂದರೆ ಕ್ರಿಸ್ತಯೇಸುವೇ; ಸಾಯುವುದು ಲಾಭವೇ.


ದೇವರ ವಿಷಯದಲ್ಲಿಯೂ ಅಂತೆಯೇ. ದೇವರು ತಮ್ಮ ಕೋಪಾಗ್ನಿಯನ್ನು ಪ್ರದರ್ಶಿಸಿ, ತಮ್ಮ ಶಕ್ತಿಯನ್ನು ಪ್ರಕಟಿಸಲು ಬಯಸಿದರು. ಹಾಗೆಮಾಡದೆ ವಿಕೋಪಕ್ಕೂ ವಿನಾಶಕ್ಕೂ ಮಾಡಲಾಗಿದ್ದ ಕುಡಿಕೆಯನ್ನು ಹೋಲುವವರನ್ನು ಅತ್ಯಂತ ಸಹನೆಯಿಂದ ಸೈರಿಸಿಕೊಂಡರಾದರೆ, ಯಾರು ಏನನ್ನು ತಾನೇ ಹೇಳಲಾದೀತು?


ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು.


ಯೇಸು ಸ್ವಾಮಿ ಪುನಃ ಅವರಿಗೆ, “ನಾನು ಹೊರಟುಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


“ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.


ಆದ್ದರಿಂದ ತಟ್ಟನೆ ಒದಗುವುದು ವಿಪತ್ತು ಮತ್ತೆ ಏಳಲಾಗದಂತಹ ಕಠಿಣ ಆಪತ್ತು.


ಹಸುರಿರಲಿ ಒಣಗಿರಲಿ, ಒಲೆ ಪಾಲಾಗಲಿ ಮುಳ್ಳಿನಂತೆ I ನಿಶ್ಯೇಷವಾಗಲಿ ದೇವಕೋಪಾಗ್ನಿಗೆ ಸಿಲುಕಿದಂತೆ II


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.


ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II


ಬುದ್ಧಿವಂತರ ಹೃದಯ ಜ್ಞಾನದ ಆಶ್ರಯ; ಬುದ್ಧಿಹೀನರ ಹೃದಯ ಜ್ಞಾನದ ಶೂನ್ಯ.


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ನಿರ್ದೋಷಿಯ ಮಾರ್ಗ ಸರಾಗ; ದುಷ್ಟತನದಿಂದ ದುರುಳನ ಪತನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು