Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:8 - ಕನ್ನಡ ಸತ್ಯವೇದವು C.L. Bible (BSI)

8 ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಾರ್ಗವನ್ನು ಗ್ರಹಿಸಿಕೊಳ್ಳುವದೇ ಜಾಣನ ಜ್ಞಾನ; ಮೂಢರ ಮೂರ್ಖತನ ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜಾಣನ ಜ್ಞಾನವು ತನ್ನ ಮಾರ್ಗಗಳಿಗೆ ಆಲೋಚನೆ ನೀಡುತ್ತದೆ. ಮೂಢರ ಬುದ್ಧಿಹೀನತೆಯು ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:8
21 ತಿಳಿವುಗಳ ಹೋಲಿಕೆ  

ಬುದ್ಧಿಹೀನರಾಗಿರದೆ ಪ್ರಭುವಿನ ಚಿತ್ತವೇನೆಂದು ಗ್ರಹಿಸಿಕೊಳ್ಳಿರಿ.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.


ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ.


ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.


ನಾನು ಹಿಡಿದಿರುವ ಹಾದಿ ನೀತಿಯುತ ನಾನು ನಡೆಯುವುದು ನ್ಯಾಯಪಥ.


ಆಗ ನೀತಿನ್ಯಾಯಗಳನ್ನು ನೀನರಿತುಕೊಳ್ಳುವೆ, ಸಕಲ ಸನ್ಮಾರ್ಗಸತ್ಯತೆಗಳನ್ನೂ ತಿಳಿದುಕೊಳ್ಳುವೆ.


ನನ್ನನು ನಿರ್ಮಿಸಿ ರೂಪಿಸಿವೆ ನಿನ್ನ ಕೈಗಳು I ನೀಡು ಬುದ್ಧಿಯನು ನಿನ್ನಾಜ್ಞೆಗಳನು ಕಲಿಯಲು II


ನಿನ್ನ ನಿಬಂಧನೆಗಳ ಪಾಲನೆಯಲಿ I ಸ್ಥಿರತೆ ಇದ್ದರೆ ಒಳಿತು ನನ್ನ ಮನದಲಿ II


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


“ಜೆರುಸಲೇಮ್, ಕಣ್ಣೆತ್ತಿ ನೋಡು, ಉತ್ತರದಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ಅಂದವಾದ ಆ ನಿನ್ನ ಹಿಂಡು ಎಲ್ಲಿ?


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ಇಹಲೋಕಪ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ


ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುತ್ತಾನೆ; ಬುದ್ಧಿವಂತನು ಸನ್ಮಾರ್ಗದಲ್ಲಿ ಮುಂದುವರಿಯುತ್ತಾನೆ.


ಸತ್ಪುರುಷನ ಉದ್ದೇಶ ನ್ಯಾಯಯುತ; ದುಷ್ಟರ ಆಲೋಚನೆ ಮೋಸಭರಿತ.


ಆಗ “ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ ಜ್ಞಾನ ಮೂಢತನಕ್ಕಿಂತ ಶ್ರೇಷ್ಠ” ಎಂದು ಗೋಚರವಾಯಿತು.


ಏಕೆಂದರೆ ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ನಿರಂತರವಾಗಿ ಮರೆತುಹೋಗುವರು. ಮುಂದಿನ ಕಾಲದವರು ಈಗಿನವರನ್ನೆಲ್ಲ ಮರೆತುಬಿಡುವರು ಎಂಬುದು ನಿಶ್ಚಯ. ನಿಸ್ಸಂದೇಹವಾಗಿ ಮೂಢನಂತೆ ಜ್ಞಾನಿಯು ಮೃತನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು