Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:13 - ಕನ್ನಡ ಸತ್ಯವೇದವು C.L. Bible (BSI)

13 ಹರ್ಷಹೃದಯದಿಂದ ಮುಖ ಅರಳುವುದು; ಮನೋವ್ಯಥೆಯಿಂದ ಚೈತನ್ಯ ಕುಂದುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹರ್ಷ ಹೃದಯದಿಂದ ಹಸನ್ಮುಖ, ಮನೋವ್ಯಥೆಯಿಂದ ಆತ್ಮಭಂಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹರ್ಷಹೃದಯದಿಂದ ಹಸನ್ಮುಖ; ಮನೋವ್ಯಥೆಯಿಂದ ಆತ್ಮಭಂಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಂತೋಷವಾಗಿರುವವನ ಮುಖದಲ್ಲಿ ಆನಂದ ಎದ್ದುಕಾಣುವುದು. ದುಃಖಗೊಂಡಿರುವವನ ಆತ್ಮದಲ್ಲಿ ವ್ಯಥೆ ಎದ್ದುಕಾಣುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಂತೋಷದ ಹೃದಯವು ಹರ್ಷವುಳ್ಳ ಮುಖಭಾವ ತೋರುವುದು. ಆದರೆ ನೊಂದ ಹೃದಯವು ಆತ್ಮಚೈತನ್ಯವನ್ನು ಕುಂದಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:13
10 ತಿಳಿವುಗಳ ಹೋಲಿಕೆ  

ಹರ್ಷ ಹೃದಯ ಒಳ್ಳೆಯ ಔಷಧ; ಕುಗ್ಗಿದ ಮನದಿಂದ ಅಸ್ಥಿಪಂಜರ.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.


ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು; ಆತ್ಮವೇ ನೊಂದರೆ ಸಹಿಸುವವರಾರು?


ಚಿಂತೆ ಮನಸ್ಸನ್ನು ಕುಗ್ಗಿಸುತ್ತದೆ; ಸವಿಮಾತು ಅದನ್ನು ಹಿಗ್ಗಿಸುತ್ತದೆ.


ದಲಿತರ ದಿನಗಳೆಲ್ಲ ದುಃಖಭರಿತ; ಹರ್ಷ ಹೃದಯನಿಗೆ ಸದಾ ಹಬ್ಬದಾನಂದ.


ದೇವರ ಚಿತ್ತಾನುಸಾರ ಬಂದೊದಗುವ ದುಃಖವು ಹೃದಯ ಪರಿವರ್ತನೆಗೆ ಕಾರಣವಾಗುತ್ತದೆ; ಜೀವೋದ್ಧಾರಕ್ಕೆ ಎಡೆಮಾಡುತ್ತದೆ. ಕೇವಲ ಪ್ರಾಪಂಚಿಕವಾದ ದುಃಖವು ಸಾವಿಗೆ ಒಯ್ಯುತ್ತದೆ;


ಈಗ ನೀವು ಅವನನ್ನು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ ಅವನು ಅತೀವ ದುಃಖದಲ್ಲಿಯೇ ಮುಳುಗಿಹೋದಾನು.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ರಾಜ ನನಗೆ, “ನೀನು ಕಳೆಗುಂದಿದವನಾಗಿರುವೆ, ಏಕೆ? ನಿನ್ನ ದೇಹಾರೋಗ್ಯ ಚೆನ್ನಾಗಿದೆಯಲ್ಲವೆ? ಇದಕ್ಕೆ ಮನೋವೇದನೆಯೇ ಹೊರತು ಬೇರೇನೂ ಕಾರಣ ಇರಲಾರದು,” ಎಂದು ಹೇಳಿದ. ನನಗೆ ಮಹಾಭೀತಿಯುಂಟಾಯಿತು.


ಶಾಂತಗುಣವು ದೇಹಕ್ಕೆ ಆರೋಗ್ಯದಾಯಕವು; ಹೊಟ್ಟೆಕಿಚ್ಚು ಎಲುಬಿಗೆ ಕ್ಷಯ ರೋಗವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು