Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:16 - ಕನ್ನಡ ಸತ್ಯವೇದವು C.L. Bible (BSI)

16 ನೆಮ್ಮದಿಯಿಲ್ಲದ ಸಿರಿಸಂಪತ್ತಿಗಿಂತಲು, ಸರ್ವೇಶ್ವರನ ಭಯಭಕ್ತಿಯಿಂದ ಕೂಡಿದ ಕಿಂಚಿತ್ತೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪಧನವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಹಳ ಐಶ್ವರ್ಯವನ್ನು ಹೊಂದಿದ್ದು ಸಮಾಧಾನವಿಲ್ಲದೆ ಇರುವುದಕ್ಕಿಂತ ಸ್ವಲ್ಪ ಐಶ್ವರ್ಯವನ್ನು ಹೊಂದಿದ್ದು ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತೊಂದರೆಯಿಂದ ಕೂಡಿದ ದೊಡ್ಡ ಸಂಪತ್ತಿಗಿಂತ ಯೆಹೋವ ದೇವರ ಭಯದಿಂದ ಕೂಡಿದ ಅಲ್ಪವೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:16
11 ತಿಳಿವುಗಳ ಹೋಲಿಕೆ  

ಅನ್ಯಾಯದಿಂದ ಗಳಿಸಿದ ಅಪಾರ ನಿಧಿಗಿಂತಲು ನ್ಯಾಯದಿಂದ ಕೂಡಿಸಿದ ಅಲ್ಪ ಧನ ಲೇಸು.


ದುರುಳರ ವಿಪುಲ ಆಸ್ತಿಪಾಸ್ತಿಗಿಂತಲು I ಸತ್ಯವಂತರ ಬಡತನವೆನಿತೊ ಮಿಗಿಲು II


ಇರುವುದರಲ್ಲೇ ಸಂತೃಪ್ತನಾಗಿರುವವನು ಭಕ್ತಿಯಲ್ಲಿ ನಿಜಕ್ಕೂ ಶ್ರೀಮಂತನಾಗಿರುತ್ತಾನೆ.


ದುರ್ಮಾರ್ಗಿಯಾದ ಧನವಂತನಿಗಿಂತ ನಿರ್ದೋಷಿಯಾಗಿ ನಡೆವ ದರಿದ್ರನೇ ಲೇಸು.


ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ದಲಿತರ ದಿನಗಳೆಲ್ಲ ದುಃಖಭರಿತ; ಹರ್ಷ ಹೃದಯನಿಗೆ ಸದಾ ಹಬ್ಬದಾನಂದ.


ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎರಡು ಕೈಹಿಡಿ ವ್ಯರ್ಥ ಪರಿಶ್ರಮಕ್ಕಿಂತ ಒಂದೇ ಕೈಹಿಡಿಯಷ್ಟು ಸಂಪಾದನೆ ಪಡೆದು ನೆಮ್ಮದಿಯಿಂದಿರುವುದು ಲೇಸು.


ಜಗಳ ತುಂಬಿದ ಮನೆಯಲ್ಲಿ ಹಬ್ಬದೂಟ ಮಾಡುವುದಕ್ಕಿಂತಲು ಶಾಂತಿ ಸಮಾಧಾನದಿಂದ ಕೂಡಿದ ಒಣ ತುತ್ತೇ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು