Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:18 - ಕನ್ನಡ ಸತ್ಯವೇದವು C.L. Bible (BSI)

18 ಉಗ್ರಕೋಪಿ ವ್ಯಾಜ್ಯವೆಬ್ಬಿಸುತ್ತಾನೆ; ದೀರ್ಘಶಾಂತನು ಜಗಳ ತೀರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕೋಪಿಷ್ಟನು ವ್ಯಾಜ್ಯವನ್ನೆಬ್ಬಿಸುವನು; ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮುಂಗೋಪಿಯು ಜಗಳವನ್ನು ಎಬ್ಬಿಸುವನು. ತಾಳ್ಮೆಯುಳ್ಳವನು ಶಾಂತಿಯನ್ನು ಸ್ಥಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಕೋಪಿಷ್ಟನು ವಿವಾದವನ್ನು ಎಬ್ಬಿಸುವನು. ಆದರೆ ತಾಳ್ಮೆಯಿಂದ ಇರುವವನು ಜಗಳವನ್ನು ಶಾಂತಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:18
21 ತಿಳಿವುಗಳ ಹೋಲಿಕೆ  

ಕೆಂಡಕ್ಕೆ ಇದ್ದಲುಬೇಕು, ಬೆಂಕಿಗೆ ಸೌದೆ ಬೇಕು; ವ್ಯಾಜ್ಯ ಕೆರಳಿಸಲು ಜಗಳಗಂಟಿ ಇರಲೇಬೇಕು.


ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.


ಕೋಪಿಷ್ಠನು ಜಗಳವೆಬ್ಬಿಸುವನು; ಕ್ರೋಧಶೀಲನು ದೋಷಭರಿತನು.


ದೀರ್ಘಶಾಂತನು ಬಹು ಬುದ್ಧಿವಂತನು; ಉಗ್ರಕೋಪಿ ಎತ್ತಿಹಿಡಿವನು ಮೂರ್ಖತನವನ್ನು.


ರಾಜನು ಸಿಟ್ಟುಗೊಂಡನೆಂದು ಉದ್ಯೋಗಕ್ಕೇ ರಾಜೀನಾಮೆ ಕೊಟ್ಟುಬಿಡಬೇಡ; ತಾಳ್ಮೆಯಿಂದ ಘನದೋಷಗಳನ್ನೂ ಅಳಿಸಬಹುದು.


ತುಂಟನು ಜಗಳವನ್ನು ಹುಟ್ಟಿಸುತ್ತಾನೆ; ಚಾಡಿಕೋರನು ಮಿತ್ರರನ್ನು ಬೇರ್ಪಡಿಸುತ್ತಾನೆ.


ಜಗಳವೆಬ್ಬಿಸುತ್ತದೆ ದ್ವೇಷ; ಪಾಪಗಳ ಮರೆಸುತ್ತದೆ ಪ್ರೇಮ.


ಅತ್ಯಾಸೆಪಡುವವನು ಜಗಳವೆಬ್ಬಿಸುವನು; ಸರ್ವೇಶ್ವರನಲ್ಲಿ ಭರವಸೆಯಿಟ್ಟವನು ಬಲಿಷ್ಠನು.


ಸಹನಶೀಲತೆಯಿಂದ ಅರಸನನ್ನೂ ಒಲಿಸಿಕೊಳ್ಳಬಹುದು; ಮೃದುವಾದ ನಾಲಿಗೆ ಎಲುಬನ್ನೂ ಮುರಿಯಬಲ್ಲದು.


ಆಗ ಇಸ್ರಯೇಲರು ಯೆಹೂದ್ಯರಿಗೆ, “ಅರಸರಲ್ಲಿ ನಮಗೆ ಹತ್ತುಪಾಲು ಉಂಟಲ್ಲವೆ? ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸರನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೇ?’ ಎಂದರು. ಇಸ್ರಯೇಲರ ವಾದಕ್ಕಿಂತ ಯೆಹೂದ್ಯರ ವಾದ ಉಗ್ರವಾಗಿತ್ತು.


ಸೋಮಾರಿಯ ದಾರಿ ಮುಳ್ಳಿನ ಬೇಲಿ; ಸಜ್ಜನರ ಮಾರ್ಗ ರಾಜಬೀದಿ.


ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.


ಕೋಪಿಷ್ಠನ ಸಂಗಡ ಸ್ನೇಹ ಬೆಳೆಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು