Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:19 - ಕನ್ನಡ ಸತ್ಯವೇದವು C.L. Bible (BSI)

19 ಸೋಮಾರಿಯ ದಾರಿ ಮುಳ್ಳಿನ ಬೇಲಿ; ಸಜ್ಜನರ ಮಾರ್ಗ ರಾಜಬೀದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸೋಮಾರಿಯ ದಾರಿ ಮುಳ್ಳುಬೇಲಿ; ಯಥಾರ್ಥವಂತನ ಮಾರ್ಗ ರಾಜಮಾರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸೋಮಾರಿಗೆ ಎಲ್ಲೆಲ್ಲೂ ತೊಂದರೆ, ಯಥಾರ್ಥವಂತನಿಗೆ ಜೀವನ ಸರಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ. ಆದರೆ ಯಥಾರ್ಥವಂತನ ಮಾರ್ಗವು ರಾಜಮಾರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:19
18 ತಿಳಿವುಗಳ ಹೋಲಿಕೆ  

ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.


ವಕ್ರಬುದ್ಧಿಯುಳ್ಳವನ ಹಾದಿತುಂಬ ಮುಳ್ಳು, ಉರುಳು; ಅದರಿಂದ ದೂರವಿರುವನು ಪ್ರಾಣದಾಸೆಯುಳ್ಳವನು.


“ಬೀದಿಯಲ್ಲಿದೆ, ಹೊರಗೆ ಓಡಾಡುತ್ತಿದೆ ಸಿಂಹ", ಇದು ಮೈಗಳ್ಳನ ಪಿಳ್ಳೆಯ ನೆವ.


“ಹೊರಗಡೆ ಕಾದಿದೆ ಸಿಂಹ, ಬೀದಿಗೆ ಕಾಲಿಟ್ಟರೆ ತಿಂದುಬಿಡುವುದು!” ಇದು ಮೈಗಳ್ಳನ ಪಿಳ್ಳೆಯ ನೆವ.


ತಿಳುವಳಿಕೆ ಉಳ್ಳವನಿಗೆ ಅವೆಲ್ಲ ಸರಳ ಗ್ರಹಿಕೆ ಉಳ್ಳವನಿಗೆ ಅವು ಯಥಾರ್ಥ.


ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು I ಶತ್ರುರಹಿತ ಹಾದಿಯಲಿ ನಡೆಸು ಎನ್ನನು II


ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.


ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II


ಶತ್ರುಗಳು ಮುತ್ತಿಹರು, ಸತ್ಯ ಪಥದಲಿ ನಡೆಸೆನ್ನನು I ನೇರಮಾಡೆನಗೆ ದೇವಾ, ನಿನ್ನ ಸಿರಿಮಾರ್ಗವನು II


“ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು.


ಉಗ್ರಕೋಪಿ ವ್ಯಾಜ್ಯವೆಬ್ಬಿಸುತ್ತಾನೆ; ದೀರ್ಘಶಾಂತನು ಜಗಳ ತೀರಿಸುತ್ತಾನೆ.


ಬುದ್ಧಿವಂತ ಮಗ ತಂದೆಯನ್ನು ಸಂತೋಷಗೊಳಿಸುತ್ತಾನೆ; ಬುದ್ಧಿಹೀನನು ಹೆತ್ತ ತಾಯಿಯನ್ನು ತಿರಸ್ಕರಿಸುತ್ತಾನೆ.


ಎಲೈ ಸೋಮಾರಿಯೇ, ಇರುವೆಯ ಬಳಿಗೆ ಹೋಗು; ಅದರ ನಡವಳಿಕೆಯನ್ನು ನೋಡಿ ಜ್ಞಾನಿಯಾಗು.


ನಿರ್ದೋಷಿಯ ಮಾರ್ಗ ಸರಾಗ; ದುಷ್ಟತನದಿಂದ ದುರುಳನ ಪತನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು