Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:2 - ಕನ್ನಡ ಸತ್ಯವೇದವು C.L. Bible (BSI)

2 ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜ್ಞಾನಿಗಳ ನಾಲಿಗೆಯು ತಿಳುವಳಿಕೆಯನ್ನು ಸಾರ್ಥಕ ಮಾಡುವದು; ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಕ್ಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:2
14 ತಿಳಿವುಗಳ ಹೋಲಿಕೆ  

ಜಾಣನು ತನ್ನ ಜ್ಞಾನವನ್ನು ಮುಚ್ಚಿಡುವನು; ಮೂಢನು ತನ್ನ ಮೂರ್ಖತನವನ್ನು ಪ್ರಕಟಿಸುವನು.


ಸಜ್ಜನರು ಸಮಾಲೋಚಿಸಿ ಉತ್ತರಿಸುತ್ತಾರೆ; ದುರ್ಜನರು ಕೆಟ್ಟದ್ದನ್ನು ಕಕ್ಕುತ್ತಿರುತ್ತಾರೆ.


ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಮೂಢನು ಮೂರ್ಖತನವನ್ನು ತೋರ್ಪಡಿಸುತ್ತಾನೆ.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಜ್ಞಾನಿಯ ಹೃದಯದಿಂದ ಬಾಯಿಗೆ ಜಾಣತನ; ಅವನ ತುಟಿಗಳಿಗೆ ಕಲಿಕೆಯ ಚೂಟಿತನ.


ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.


ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II


ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II


ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.


ಚಿಂತೆ ಹೆಚ್ಚಾದರೆ ಕನಸು ಕಾಣಿಸಿಕೊಳ್ಳುತ್ತದೆ. ಮಾತು ಹೆಚ್ಚಾದರೆ ಹುಚ್ಚುತನ ಹೊರಬರುತ್ತದೆ.


ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು?


ಆಗ ನೀನು ವಿವೇಕಶೀಲನಾಗುವೆ; ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಯ್ದುಕೊಳ್ಳುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು