Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:21 - ಕನ್ನಡ ಸತ್ಯವೇದವು C.L. Bible (BSI)

21 ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುತ್ತಾನೆ; ಬುದ್ಧಿವಂತನು ಸನ್ಮಾರ್ಗದಲ್ಲಿ ಮುಂದುವರಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು, ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು; ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮೂಢನಿಗೆ ಮೂಢತನದಲ್ಲಿ ಸಂತೋಷ. ಜ್ಞಾನಿಯು ಎಚ್ಚರಿಕೆಯಿಂದಿದ್ದು ಒಳ್ಳೆಯದನ್ನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬುದ್ಧಿಹೀನನು ಮೂರ್ಖತನದಲ್ಲಿ ಉಲ್ಲಾಸಿಸುವನು. ತಿಳುವಳಿಕೆಯನ್ನು ಹೊಂದಿರುವವನು ನೇರ ಮಾರ್ಗದಲ್ಲಿ ನಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:21
13 ತಿಳಿವುಗಳ ಹೋಲಿಕೆ  

ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.


ಮೂರ್ಖನಿಗೆ ಕೆಡುಕುಮಾಡುವ ಚಟ; ಬುದ್ಧಿವಂತನಿಗೆ ಜ್ಞಾನಗಳಿಸುವ ಹಟ.


ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.


ಪಾಪಪರಿಹಾರವನ್ನು ಪರಿಹಾಸ್ಯಮಾಡುತ್ತಾರೆ ಮೂರ್ಖರು; ಪಾಪಕ್ಷಮೆಯನ್ನು ಕೋರುತ್ತಾರೆ ಸತ್ಪುರುಷರು.


ನೆರೆಯವನನ್ನು ತೃಣೀಕರಿಸುವವನು ಬುದ್ಧಿಹೀನ; ವಿವೇಕಿಯು ಅದರ ಬಗ್ಗೆ ತಾಳುವನು ಮೌನ.


ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ಆಲೋಚನೆಯಿಲ್ಲದೆ ಉದ್ದೇಶಗಳು ಈಡೇರವು; ಹಲವಾರು ಆಲೋಚನಾಪರರಿರುವಲ್ಲಿ ಅವು ಕೈಗೂಡುವುವು.


ನಿನ್ನ ಕಣ್ಣುಗಳು ನೇರವಾಗಿ ನಾಟಿರಲಿ, ಕಣ್ಣು ರೆಪ್ಪೆಗಳು ಮುಂದಾಗಿ ತೆರೆದಿರಲಿ.


ನೀ ನಡೆವ ದಾರಿ ಸಮನಾಗಿರಲಿ, ನೀ ಕೈಗೊಳ್ಳುವ ಹಾದಿ ದೃಢವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು