Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:23 - ಕನ್ನಡ ಸತ್ಯವೇದವು C.L. Bible (BSI)

23 ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತಕ್ಕ ಉತ್ತರಕೊಡುವವನಿಗೆ ಎಷ್ಟೋ ಉಲ್ಲಾಸ! ಸಮಯೋಚಿತವಾದ ವಚನದಲ್ಲಿ ಎಷ್ಟೋ ಸ್ವಾರಸ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸಮರ್ಪಕವಾದ ಉತ್ತರ ಸಂತೋಷವನ್ನು ಉಂಟುಮಾಡುವುದು; ತಕ್ಕ ಸಮಯದಲ್ಲಿ ಸಮಯೋಚಿತವಾದ ಮಾತು ಅತ್ಯುತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ. ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:23
14 ತಿಳಿವುಗಳ ಹೋಲಿಕೆ  

ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಮಾತುಬಲ್ಲವನು ಬದುಕುವನು ಸಂತುಷ್ಟನಾಗಿ; ಕೈಯಿರುವವನು ಬಾಳುವನು ಬಹು ಮಾನಿತನಾಗಿ.


ನೀತಿಯುತ ಮಾತನ್ನು ಅರಸನು ಮೆಚ್ಚುವನು; ಸತ್ಯವಾದಿಯನ್ನು ಆತನು ಪ್ರೀತಿಸುವನು.


ಸತ್ಯವಾದ ಉತ್ತರ ತುಟಿಗೊಂದು ಚುಂಬನ.


ಪ್ರತಿಯೊಂದು ಕಾಲಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ:


ಆಲೋಚನೆಯಿಲ್ಲದೆ ಉದ್ದೇಶಗಳು ಈಡೇರವು; ಹಲವಾರು ಆಲೋಚನಾಪರರಿರುವಲ್ಲಿ ಅವು ಕೈಗೂಡುವುವು.


ನ್ಯಾಯವಾದ ಮಾತು ಎಷ್ಟೋ ಶಕ್ತಿಯುತ ನಿಮ್ಮ ತರ್ಕವಾದರೋ ನಿರರ್ಥಕ.


ಚಿಂತೆ ಮನಸ್ಸನ್ನು ಕುಗ್ಗಿಸುತ್ತದೆ; ಸವಿಮಾತು ಅದನ್ನು ಹಿಗ್ಗಿಸುತ್ತದೆ.


ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.


ಇದನ್ನು ಕೇಳಿದ ಆ ಶಿಷ್ಯರು ಯೇಸುವನ್ನು ಹಿಂಬಾಲಿಸಿದರು.


ಇದನ್ನು ಕೇಳಿದ ಮರಿಯಳು ತಟ್ಟನೆ ಎದ್ದು ಯೇಸುವನ್ನು ಕಾಣಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು