Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:24 - ಕನ್ನಡ ಸತ್ಯವೇದವು C.L. Bible (BSI)

24 ವಿವೇಕಿಗಳ ಮಾರ್ಗ ಏರಿಸುವುದು ಸಜ್ಜೀವಕ್ಕೆ; ಅದನ್ನು ಕೈಗೊಳ್ಳುವವರು ಇಳಿಯರು ಪಾತಾಳಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು; ಅದು ಅವನನ್ನು ಪಾತಾಳದಿಂದ ತಪ್ಪಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ವಿವೇಕಿಗೆ ಜೀವದ ಮಾರ್ಗವು ಮೇಲು ಮೇಲಕ್ಕೆ ಹೋಗುತ್ತದೆ; ಅದನ್ನು ಹಿಡಿದವನು ಪಾತಾಳದಿಂದ ತಪ್ಪಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜ್ಞಾನಿಯ ಕಾರ್ಯಗಳು ಅವನನ್ನು ಯಶಸ್ಸಿಗೆ ನಡೆಸುತ್ತವೆ; ಅವು ಅವನನ್ನು ಮರಣದ ಹಾದಿಯಿಂದ ತಪ್ಪಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಜೀವದ ಮಾರ್ಗವು ಜಾಣನನ್ನು ಮೇಲಕ್ಕೆತ್ತುವುದು. ಅದು ಅವನನ್ನು ಪಾತಾಳಕ್ಕೆ ಇಳಿಯುವದರಿಂದ ತಪ್ಪಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:24
15 ತಿಳಿವುಗಳ ಹೋಲಿಕೆ  

ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”


“ಇದೂ ಅಲ್ಲದೆ ಸರ್ವೇಶ್ವರ ಈ ಜನರಿಗೆ ಹೀಗೆಂದು ತಿಳಿಸಲು ನನಗೆ ಆಜ್ಞಾಪಿಸಿದ್ದಾರೆ: ‘ಇಗೋ ಜೀವದ ಮಾರ್ಗವನ್ನು ಮತ್ತು ಸಾವಿನ ಮಾರ್ಗವನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇನೆ.


ಬೆತ್ತದಿಂದ ಬೇಕಾದರೆ ಹೊಡೆ; ಮಗುವಿನ ಆತ್ಮ ಪಾತಾಳಕ್ಕೆ ಬೀಳದಂತೆ ತಡೆ.


ಅವಳ ಮನೆ ಪಾತಾಳಕ್ಕೆ ಹಾದಿ; ಮರಣದ ಗುಡಾರಗಳಿಗೆ ಇಳಿದಾರಿ.


ಏಕೆಂದರೆ ಆಜ್ಞೆಯೇ ಜ್ಯೋತಿ, ಬೋಧನೆಯೇ ಬೆಳಕು, ಶಿಸ್ತಿನಿಂದ ಕೂಡಿದ ಶಿಕ್ಷಣವೇ ಜೀವನಕ್ಕೆ ಮಾರ್ಗ.


ಅವಳ ಕಾಲುಗಳು ಮರಣದತ್ತ ಇಳಿಯುತ್ತವೆ, ಹೆಜ್ಜೆಗಳು ಪಾತಾಳದತ್ತ ಕೊಂಡೊಯ್ಯುತ್ತವೆ.


ಅವಳ ಮನೆ ಪಾತಾಳಕ್ಕಿಳಿಸುವ ದಾರಿ, ಅವಳ ಮಾರ್ಗ ಪ್ರೇತಲೋಕಕ್ಕೆ ಹಾದಿ.


ಕುಚೋದ್ಯಗಾರನನ್ನು ಗದರಿಸಬೇಡ, ಅವನು ನಿನ್ನನ್ನು ದ್ವೇಷಿಸುವನು. ಜ್ಞಾನವಂತನನ್ನು ಗದರಿಸು, ಅವನು ನಿನ್ನನ್ನು ಪ್ರೀತಿಸುವನು.


ಕೇಡಿದೆಯೇ ನೋಡು ನನ್ನ ಮಾರ್ಗದಲಿ I ನಡೆಸೆನ್ನನು ಆ ಸನಾತನ ಪಥದಲಿ II


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು