Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:26 - ಕನ್ನಡ ಸತ್ಯವೇದವು C.L. Bible (BSI)

26 ದುರುಳರ ಕುಯುಕ್ತಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರ ಸುಸೂಕ್ತಿ ಆತನಿಗೆ ಪ್ರಿಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕುಯುಕ್ತಿಯು ಯೆಹೋವನಿಗೆ ಅಸಹ್ಯ, ನಯನುಡಿಯು ಆತನಿಗೆ ಪ್ರಿಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಕುಯುಕ್ತಿಯು ಯೆಹೋವನಿಗೆ ಅಸಹ್ಯ; ನಯನುಡಿಯು ನಿರ್ಮಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೋವನು ದುರಾಲೋಚನೆಗಳನ್ನು ದ್ವೇಷಿಸುವನು; ಕನಿಕರದ ಮಾತುಗಳಲ್ಲಾದರೋ ಸಂತೋಷಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದುಷ್ಟರ ಆಲೋಚನೆಯು ಯೆಹೋವ ದೇವರಿಗೆ ಅಸಹ್ಯವಾಗಿದೆ, ಆದರೆ ಸೌಜನ್ಯಶೀಲ ಮಾತುಗಳು ಅವರ ದೃಷ್ಟಿಯಲ್ಲಿ ಶುದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:26
13 ತಿಳಿವುಗಳ ಹೋಲಿಕೆ  

ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.


ನಿನಗೊಪ್ಪಿಗೆಯಾಗಲಿ ನನ್ನ ಬಾಯಮಾತು, ಹೃದಯಧ್ಯಾನ I ನೀನೆನ್ನ ಪ್ರಭು, ನನಗೆ ಉದ್ಧಾರಕ, ನನಗಾಶ್ರಯಧಾಮ II


ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II


ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


ಮೂರ್ಖನ ಯೋಜನೆ ಪಾಪಮಯ; ಕುಚೋದ್ಯನು ಜನರಿಂದ ತಿರಸ್ಕೃತನು.


ಗರ್ವಿಷ್ಠನ ಮನೆಯನ್ನು ಸರ್ವೇಶ್ವರ ಕೆಡವಿಬಿಡುವನು; ವಿಧವೆಯ ಎಲ್ಲೆ ಮೇರೆಯನ್ನು ಸುಭದ್ರಪಡಿಸುವನು.


ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.


ವಕ್ರಹೃದಯರು ಸರ್ವೇಶ್ವರನಿಗೆ ಅಸಹ್ಯರು; ಸನ್ಮಾರ್ಗಿಗಳು ಆತನ ಕೃಪೆಗೆ ಪಾತ್ರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು