Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:29 - ಕನ್ನಡ ಸತ್ಯವೇದವು C.L. Bible (BSI)

29 ಸರ್ವೇಶ್ವರನು ದುರುಳರಿಗೆ ದೂರ; ನೀತಿವಂತರ ಪ್ರಾರ್ಥನೆಗೆ ಹತ್ತಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋವನು ದುಷ್ಟರಿಗೆ ಬಹುದೂರ. ಶಿಷ್ಟರ ಪ್ರಾರ್ಥನೆಯನ್ನಾದರೋ ಆತನು ಯಾವಾಗಲೂ ಕೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೋವ ದೇವರು ದುಷ್ಟರಿಗೆ ದೂರ; ಆದರೆ ನೀತಿವಂತರ ಪ್ರಾರ್ಥನೆಯನ್ನು ಅವರು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:29
19 ತಿಳಿವುಗಳ ಹೋಲಿಕೆ  

ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ವಿನಾಶವಾಗುವರು ನಿನ್ನಿಂದ ದೂರ ಸರಿವವರು I ಧ್ವಂಸವಾಗುವರು ನಿನಗೆ ದ್ರೋಹವೆಸಗಿದವರು II


ಎಲ್ಲಿ ಯಾಚಿಸಿದರೂ ಅವರಿಗಿರಲಿಲ್ಲ ರಕ್ಷಕ I ಸರ್ವೇಶ್ವರನಿಗೆ ಮೊರೆಯಿಟ್ಟರು ದೊರಕಲಿಲ್ಲ ಉತ್ತರ II


ನನ್ನಿಂದೇಕೆ ಪ್ರಭು, ಅಷ್ಟು ದೂರವಿರುವೆ? I ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ? II


ದೇವರು ಪೊಳ್ಳುಮಾತಿಗೆ ಕಿವಿಗೊಡನು ಸರ್ವಶಕ್ತನು ಅದಕ್ಕೆ ಎಂದಿಗೂ ಲಕ್ಷ್ಯಕೊಡನು.


ಆಗ ನನಗೆ ಮೊರೆಯಿಟ್ಟರೂ ಉತ್ತರಿಸೆನು; ಆತುರದಿಂದ ಹುಡುಕಿದರೂ ನಾನು ಕಾಣಸಿಗೆನು.


ಹಸನ್ಮುಖ ಕಂಡಾಗ ಹೃದಯಕ್ಕೆ ಆನಂದ; ಶುಭಸಮಾಚಾರದಿಂದ ದೇಹಕ್ಕೆ ಉತ್ತೇಜನ.


ಬದಲಿಗೆ, ನಿಮ್ಮ ಅಪರಾಧಗಳೇ ನಿಮ್ಮನ್ನು ಜೀವದಿಂದ ಬೇರ್ಪಡಿಸುತ್ತಾ ಬಂದಿವೆ. ಅವರು ನಿಮಗೆ ಕಿವಿಗೊಡದಂತೆ ನಿಮ್ಮ ಪಾಪಗಳೇ ಅವರನ್ನು ವಿಮುಖರನ್ನಾಗಿ ಮಾಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು