Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:32 - ಕನ್ನಡ ಸತ್ಯವೇದವು C.L. Bible (BSI)

32 ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಶಿಕ್ಷೆಯನ್ನೊಲ್ಲದವನು ತನ್ನನ್ನೇ ನಿರಾಕರಿಸುವನು; ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಶಿಕ್ಷೆಯನ್ನು ಒಪ್ಪದವನು ತನಗೇ ಕೇಡುಮಾಡಿಕೊಳ್ಳುತ್ತಾನೆ. ಗದರಿಕೆಯನ್ನು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಶಿಸ್ತನ್ನು ನಿರಾಕರಿಸುವವನು, ತನಗೆ ತಾನೆ ಹಾನಿ ತಂದುಕೊಳ್ಳುತ್ತಾನೆ, ಆದರೆ ಗದರಿಕೆಗೆ ಕಿವಿಗೊಡುವವನು ವಿವೇಕವನ್ನು ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:32
27 ತಿಳಿವುಗಳ ಹೋಲಿಕೆ  

ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ಬುದ್ಧಿವಂತನ ಮನಸ್ಸು ತಿಳುವಳಿಕೆಯನ್ನು ಗಳಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.


ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಇದನ್ನು ಕೊಳ್ಳಲು ಬೇಕಾದ ಬುದ್ಧಿಯೇ ಅವನಿಗಿಲ್ಲವಲ್ಲಾ!


ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುತ್ತಾನೆ; ಬುದ್ಧಿವಂತನು ಸನ್ಮಾರ್ಗದಲ್ಲಿ ಮುಂದುವರಿಯುತ್ತಾನೆ.


ವಿವೇಕಿಯ ಮನ ತಿಳುವಳಿಕೆಯನ್ನು ಅರಸುವುದು; ಮತಿಹೀನನ ಬಾಯಿ ಮೂರ್ಖತನವನ್ನು ಮುಕ್ಕುವುದು.


ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ I ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ II


ಅಲ್ಲಿ ಅವರಿಗೆ, ‘ಈ ನಮ್ಮ ಮಗ ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ,ತುಂಟ’ ಎಂದು ಸಾಕ್ಷಿ ಹೇಳಬೇಕು.


“ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ, ಶಿಕ್ಷಿಸಿದ್ದರೂ ಮೊಂಡನೂ ಅವಿಧೇಯನೂ ಆಗಿ, ಅವರ ಮಾತನ್ನು ಕೇಳದೆಹೋದರೆ,


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ಶಿಕ್ಷೆಯನ್ನು ಉಪೇಕ್ಷಿಸುವವನಿಗೆ ಕಾದಿದೆ ಬಡತನ ಹಾಗು ಅವಮಾನ; ಗದರಿಕೆಯನ್ನು ಗಮನಿಸುವವ ಹೊಂದುವನು ಸನ್ಮಾನ.


ಮೂರ್ಖನು ತಂದೆಯ ಶಿಕ್ಷಣವನ್ನು ನಿರ್ಲಕ್ಷ್ಯ ಮಾಡುತ್ತಾನೆ; ಜಾಣನು ಆತನ ಗದರಿಕೆಯನ್ನೂ ಗಮನಿಸುತ್ತಾನೆ.


ಹಿತಕರ ಬುದ್ಧಿವಾದಕ್ಕೆ ಕಿವಿಗೊಡುವವನು ಸಜ್ಜನರ ಸತ್ಸಂಘದಲ್ಲಿ ಪಾಲ್ಗೊಳ್ಳುವನು.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಿಗೆ ಜ್ಞಾನೋದಯ; ಘನತೆಗೌರವಕ್ಕೆ ಮುಂಚೆ ಸವಿನಯ.


ಅಜ್ಞಾನಿಗಳ ಸ್ತುತಿಗೀತೆಗಿಂತ ಸುಜ್ಞಾನಿಗಳ ಗದರಿಕೆ ಲೇಸು.


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಶಿಸ್ತನ್ನು ಕೈಗೊಳ್ಳುವವನು ಜೀವಮಾರ್ಗದಲ್ಲಿರುವನು; ತಿದ್ದುಪಾಟನ್ನು ತಿರಸ್ಕರಿಸುವವನು ದಾರಿ ತಪ್ಪುವನು.


ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು