Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:4 - ಕನ್ನಡ ಸತ್ಯವೇದವು C.L. Bible (BSI)

4 ಸಂತೈಸುವ ನಾಲಿಗೆ ಜೀವವೃಕ್ಷಕ್ಕೆ ಸಮಾನ; ಹಿಂಸಾತ್ಮಕ ನಾಲಿಗೆ ಮನಮುರಿತಕ್ಕೆ ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸಂತೈಸುವ ನಾಲಿಗೆ ಜೀವವೃಕ್ಷವು; ಬಲಾತ್ಕರಿಸುವ ನಾಲಿಗೆ ಮನಮುರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹಿತನುಡಿಗಳು ಜೀವವುಳ್ಳ ಮರದಂತಿವೆ. ಸುಳ್ಳು ಮಾತುಗಳು ಮನುಷ್ಯನ ಆತ್ಮವನ್ನು ಜಜ್ಜಿಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಿತವಾದ ನಾಲಿಗೆಯು ಜೀವವೃಕ್ಷ. ಆದರೆ ವಕ್ರ ನಾಲಿಗೆಯು ಆತ್ಮಚೈತನ್ಯವನ್ನು ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:4
15 ತಿಳಿವುಗಳ ಹೋಲಿಕೆ  

ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.


ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಅಡಿಹೊಟ್ಟೆಗೆ ಇಳಿಯುವ ಕವಳಗಳು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.


ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು; ಆತ್ಮವೇ ನೊಂದರೆ ಸಹಿಸುವವರಾರು?


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ಯಾರಾದರೂ ನಮ್ಮ ಧಾರ್ಮಿಕ ಉಪದೇಶವನ್ನು ಅನುಸರಿಸದೆ, ಪ್ರಭು ಯೇಸುಕ್ರಿಸ್ತರ ನೈಜ ಬೋಧನೆಯನ್ನು ಒಪ್ಪಿಕೊಳ್ಳದೆ ಭಿನ್ನ ಬೋಧನೆಯನ್ನು ಮಾಡುವುದಾದರೆ, ಅಂಥವನು ಅಹಂಭಾವಿ ಹಾಗೂ ಅಜ್ಞಾನಿಯೇ ಸರಿ.


ಚಾಡಿಕೋರನ ಮಾತು ರುಚಿಕರವಾದ ತುತ್ತು; ಹೊಟ್ಟೆಯೊಳಕ್ಕೆ ಗುಳುಕ್ಕನೆ ಇಳಿಯುತ್ತದೆ ಅದು.


ಬಡವ ನಾನು, ನನಗಿದೆ ಕುಂದುಕೊರತೆ I ನನ್ನ ಎದೆಗೆ ಅಲಗೇ ನಾಟಿದಂತಿದೆ II


ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ಮೂರ್ಖನು ತಂದೆಯ ಶಿಕ್ಷಣವನ್ನು ನಿರ್ಲಕ್ಷ್ಯ ಮಾಡುತ್ತಾನೆ; ಜಾಣನು ಆತನ ಗದರಿಕೆಯನ್ನೂ ಗಮನಿಸುತ್ತಾನೆ.


ಸಜ್ಜನನ ಬಾಯಿ ಜೀವದ ಬುಗ್ಗೆ; ದುರ್ಜನನ ಬಾಯಿತುಂಬ ಚಿತ್ರಹಿಂಸೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು