Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:7 - ಕನ್ನಡ ಸತ್ಯವೇದವು C.L. Bible (BSI)

7 ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜ್ಞಾನಿಗಳ ತುಟಿಗಳು ತಿಳುವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜ್ಞಾನಿಯ ಮಾತುಗಳು ತಿಳುವಳಿಕೆಯನ್ನು ಹರಡುತ್ತವೆ. ಮೂಢರ ಮಾತುಗಳು ಕೇಳಲು ಯೋಗ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಜ್ಞಾನಿಗಳ ತುಟಿಗಳು ಪರಿಜ್ಞಾನವನ್ನು ಹರಡುತ್ತವೆ. ಆದರೆ ಬುದ್ಧಿಹೀನರ ಹೃದಯವು ಹಾಗೆ ಮಾಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:7
25 ತಿಳಿವುಗಳ ಹೋಲಿಕೆ  

ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಬಳಿಕ ಅವರಿಗೆ, “ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.


ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ.


ನನ್ನ ವಧುವೇ, ಜೇನು ಸುರಿಯುತ್ತಿದೆ ನಿನ್ನ ತುಟಿಗಳಿಂದ ಹಾಲುಜೇನು ಬರುತ್ತಿದೆ ನಿನ್ನ ನಾಲಗೆಯಡಿಯಿಂದ ಲೆಬನೋನಿನ ಸುಗಂಧ ಸೂಸುತ್ತಿದೆ ನಿನ್ನ ಉಡುಪಿನಿಂದ.


ಬಂದುವು ಆ ವಿಧಿಗಳು ನಿನ್ನ ಬಾಯಿಂದ I ವರ್ಣಿಸುವೆನು ಅವನ್ನು ನನ್ನ ಬಾಯಿಂದ II


ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ಸಜ್ಜನರ ಬಾಯಿ ಆಡುವುದು ಸುಜ್ಞಾನವನು I ಅವನ ನಾಲಿಗೆ ನುಡಿಯುವುದು ನ್ಯಾಯನೀತಿಯನು II


ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.


ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.


ನೀತಿವಂತನ ಮನೆಯೊಳು ನಿಧಿನಿಕ್ಷೇಪ; ಅನೀತಿವಂತನ ಆದಾಯ ದುಃಖತಾಪ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ಆಗ ನೀನು ವಿವೇಕಶೀಲನಾಗುವೆ; ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಯ್ದುಕೊಳ್ಳುವುವು.


ಜ್ಞಾನಿಯ ಹೃದಯದಿಂದ ಬಾಯಿಗೆ ಜಾಣತನ; ಅವನ ತುಟಿಗಳಿಗೆ ಕಲಿಕೆಯ ಚೂಟಿತನ.


ಜ್ಞಾನಿಯ ಬುದ್ಧಿ ಬಲಗೈಯಾದರೆ ಅಜ್ಞಾನಿಯ ಬುದ್ಧಿ ಎಡಗೈ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು