Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:15 - ಕನ್ನಡ ಸತ್ಯವೇದವು C.L. Bible (BSI)

15 ಪ್ರಭುವಿನ ಮುಖಪ್ರಸನ್ನತೆ ಜೀವದ ಒರತೆ; ಆತನ ಕರುಣೆ ಮುಂಗಾರು ಮಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಪ್ರಭುವಿನ ಮುಖಪ್ರಸನ್ನತೆ ಜೀವ, ಆತನ ದಯೆ ಮುಂಗಾರುಮುಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಪ್ರಭುವಿನ ಮುಖಪ್ರಸನ್ನತೆ ಜೀವ; ಆತನ ದಯೆ ಮುಂಗಾರುಮುಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರಾಜನು ಸಂತೋಷದಿಂದಿರುವಾಗ ಎಲ್ಲರ ಜೀವನವು ಉತ್ತಮವಾಗಿರುವುದು. ರಾಜನು ನಿನ್ನನ್ನು ಮೆಚ್ಚಿಕೊಂಡರೆ, ಅದು ನಿನ್ನ ಪಾಲಿಗೆ ಮೋಡದಿಂದ ಸುರಿಯುವ ಮುಂಗಾರು ಮಳೆಯಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪ್ರಕಾಶಮಾನವಾದ ಅರಸನ ಮುಖದಲ್ಲಿ ಜೀವ, ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:15
11 ತಿಳಿವುಗಳ ಹೋಲಿಕೆ  

ಹುಲ್ಲುಕೊಯ್ದ ಹೊಲದ ಮೇಲೆ ಸುರಿವ ವೃಷ್ಟಿಯಂತೆ I ಬರಲಿ ಆತ ಒಣನೆಲವ ತೋಯ್ವ ಹದಮಳೆಯಂತೆ II


ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ಅಮರ ಭಾಗ್ಯಗಳನು ನೀನನುಗ್ರಹಿಸಿದೆ I ಶ್ರೀಸನ್ನಿಧಿಯಲಾತನನು ತೋಷಗೊಳಿಸಿದೆ II


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.


ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.


ರಾಜ್ಯಾಧಿಕಾರಿಗಳಲ್ಲಿ ದಯೆ ಯಾಚಿಸುವವರು ಅನೇಕರು; ಪ್ರತಿಯೊಬ್ಬನಿಗೆ ಸರಿಯಾದ ನ್ಯಾಯ ದೊರಕಿಸುವವನು ಸರ್ವೇಶ್ವರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು