Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:22 - ಕನ್ನಡ ಸತ್ಯವೇದವು C.L. Bible (BSI)

22 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ತಕ್ಕ ದಂಡನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ, ಮೂರ್ಖನಿಗೆ ಮೂರ್ಖತನವೇ ದಂಡನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ದಂಡನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ವಿವೇಕವು ವಿವೇಕಿಗಳಿಗೆ ನಿಜಜೀವವನ್ನು ಕೊಡುತ್ತದೆ. ಆದರೆ ಮೂಢರು ತಮ್ಮ ಮೂಢತನದಿಂದಲೇ ದಂಡಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ, ಆದರೆ ಮೂರ್ಖತನವು ಮೂರ್ಖರಿಗೆ ಶಿಕ್ಷೆಯನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:22
16 ತಿಳಿವುಗಳ ಹೋಲಿಕೆ  

ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಜ್ಞಾನಿಯ ಬೋಧೆ ಜೀವದ ಬುಗ್ಗೆ; ಮಾಡುವುದದು ಮರಣದಿಂದ ಬಿಡುಗಡೆ.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಸಜ್ಜನನ ಬಾಯಿ ಜೀವದ ಬುಗ್ಗೆ; ದುರ್ಜನನ ಬಾಯಿತುಂಬ ಚಿತ್ರಹಿಂಸೆ.


ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.


ಸತ್ಪುರುಷನ ನುಡಿ ಜಲನಿಧಿ; ಜ್ಞಾನದ ಬುಗ್ಗೆ ಹರಿಯುವ ತೊರೆ.


ಸಜ್ಜನರು ಸಮಾಲೋಚಿಸಿ ಉತ್ತರಿಸುತ್ತಾರೆ; ದುರ್ಜನರು ಕೆಟ್ಟದ್ದನ್ನು ಕಕ್ಕುತ್ತಿರುತ್ತಾರೆ.


ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.


ಸರ್ವೇಶ್ವರನಲ್ಲಿ ಭಯಭಕ್ತಿಯು ಜೀವಜಲದ ಚಿಲುಮೆಯು; ಮರಣಪಾಶದಿಂದ ತಪ್ಪಿಸಿಕೊಳ್ಳಲು ಅದುವೆ ಸಾಧನವು.


ಅವು ನಿನ್ನಾತ್ಮಕ್ಕೆ ಜೀವಪ್ರದಾನವಾಗಿವೆ, ನಿನ್ನ ಕೊರಳಿಗೆ ಭೂಷಣವಾಗಿವೆ.


ಜ್ಞಾನ ಹೃದಯರಿಗೆ ಜಾಣರೆಂಬ ಬಿರುದು; ಮಧುರ ಮಾತಿನಿಂದ ಬೋಧನಾಶಕ್ತಿ ಹಿರಿದು.


ಜ್ಞಾನಿಯ ಹೃದಯದಿಂದ ಬಾಯಿಗೆ ಜಾಣತನ; ಅವನ ತುಟಿಗಳಿಗೆ ಕಲಿಕೆಯ ಚೂಟಿತನ.


ಬುದ್ಧಿಹೀನನಿಗೆ ಬಾಯೇ ನಾಶ, ತುಟಿಗಳೇ ಅವನಿಗೆ ಪಾಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು