Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:27 - ಕನ್ನಡ ಸತ್ಯವೇದವು C.L. Bible (BSI)

27 ನೀಚನು ಕೇಡೆಂಬ ಗುಳಿಯನ್ನು ತೋಡುತ್ತಾನೆ; ಸುಡುವ ಬೆಂಕಿಯ ಜ್ಞಾಲೆ ಅವನ ನಾಲಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ, ಅವನ ಮಾತುಗಳು ಬೆಂಕಿಯ ಉರಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ; ಅವನ ತುಟಿಗಳಲ್ಲಿ ಬೆಂಕಿಯುರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀಚನು ಕೆಟ್ಟಕಾರ್ಯಗಳನ್ನು ಆಲೋಚಿಸಿಕೊಳ್ಳುವನು. ಅವನ ಮಾತುಗಳು ಬೆಂಕಿಯಂತೆ ನಾಶಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಭಕ್ತಿಹೀನನು ಕೇಡಿನ ಕುಣಿ ಅಗೆಯುತ್ತಾನೆ. ಅವನ ತುಟಿಗಳು ಉರಿಯುವ ಬೆಂಕಿಯಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:27
15 ತಿಳಿವುಗಳ ಹೋಲಿಕೆ  

ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.


ಅವನ ಮನದಲ್ಲಿರುವುದು ಮೂರ್ಖತನ; ಅವನು ಸತತ ಕಲ್ಪಿಸುವುದು ಕೆಡುಕುತನ. ಅವನು ಬಿತ್ತನೆ ಮಾಡುವುದು ಕಾಳಗ, ಕದನ.


ಅಕ್ರಮವೆಂಬ ಹಗ್ಗಗಳಿಂದ ಅಪರಾಧ ಎಂಬ ತೇರನ್ನು ಎಳೆಯುವವರಿಗೆ ಧಿಕ್ಕಾರ !


ದುರುಳನೂ ನೀಚನೂ ಆದವನ ನಡತೆಯನ್ನು ನೋಡು: ಅವನ ಬಾಯಿಂದ ಹೊರಡುವುದು ಕುಟಿಲ ಮಾತು.


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.


ಹಣದಂತೆ ಅದನ್ನು ಹುಡುಕು, ನಿಧಿಯಂತೆ ಅದನ್ನು ತಡಕು.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.


ದುಡಿಯುವವನು ಹೊಟ್ಟೆಪಾಡಿಗಾಗಿ ದುಡಿಯುತ್ತಾನೆ; ಹೊಟ್ಟೆಕಾಟವೆ ಸಾಕು ಅವನನ್ನು ದುಡಿಸಲಿಕ್ಕೆ.


ತುಂಟನು ಜಗಳವನ್ನು ಹುಟ್ಟಿಸುತ್ತಾನೆ; ಚಾಡಿಕೋರನು ಮಿತ್ರರನ್ನು ಬೇರ್ಪಡಿಸುತ್ತಾನೆ.


ಕಣ್ಣುಮಿಟುಕಿಸುವವನು ಕುಯುಕ್ತಿಯನ್ನು ಕಲ್ಪಿಸುತ್ತಾನೆ; ತುಟಿಕಚ್ಚುವವನು ಕೇಡನ್ನು ಸಾಧಿಸುತ್ತಾನೆ.


ನೀಚಸಾಕ್ಷಿ ನ್ಯಾಯತೀರ್ಪನ್ನು ಮರ್ಯಾದಿಸನು; ದುಷ್ಟಸಾಕ್ಷಿ ದ್ರೋಹವನ್ನೂ ನುಂಗಿಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು