Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:29 - ಕನ್ನಡ ಸತ್ಯವೇದವು C.L. Bible (BSI)

29 ಹಿಂಸಾತ್ಮಕನು ನೆರೆಯವನನ್ನು ಮರುಳುಗೊಳಿಸುತ್ತಾನೆ; ಅವನನ್ನು ದುರ್ಮಾರ್ಗಕ್ಕೆ ಎಳೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ ದುರ್ಮಾರ್ಗಕ್ಕೆ ಎಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಕೆಡುಕನು ತನ್ನ ಸ್ನೇಹಿತರನ್ನೇ ಮೋಸಗೊಳಿಸಿ ನಾಶನಕ್ಕೆ ನಡೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:29
13 ತಿಳಿವುಗಳ ಹೋಲಿಕೆ  

ನೀತಿವಂತ ನೆರೆಯವನಿಗೆ ದಾರಿತೋರಿಸುವನು; ಅನೀತಿವಂತನು ಅವನಿಗೆ ದಾರಿ ತಪ್ಪಿಸುವನು.


ಹಿಂಸಾತ್ಮಕನನ್ನು ನೋಡಿ ಹೊಟ್ಟೆಕಿಚ್ಚು ಪಡಬೇಡ, ಅವನ ನಡತೆಯನ್ನು ಎಷ್ಟುಮಾತ್ರಕ್ಕೂ ಅನುಸರಿಸಬೇಡ.


ಆದಕಾರಣ ಪ್ರಿಯರೇ, ಈ ವಿಷಯಗಳನ್ನು ಮುಂಚಿತವಾಗಿಯೇ ತಿಳಿದುಕೊಂಡಿರುವ ನೀವು ಎಚ್ಚರಿಕೆಯಿಂದಿರಿ. ದುರ್ಜನರ ದುರ್ಬೋಧನೆಗೆ ಮರುಳಾಗದಿರಿ. ನಿಮ್ಮ ಸ್ಥಿರವಿಶ್ವಾಸವನ್ನು ಬಿಟ್ಟು ಭ್ರಷ್ಟರಾಗದಿರಿ.


ನಾನು ಅಂಜಿಕೊಂಡು, ಇವನ ಮಾತಿನಂತೆ ನಡೆದು ದೋಷಿಯಾಗಿ, ತಮ್ಮ ನಿಂದೆಗೂ ಕೆಟ್ಟ ಹೆಸರಿಗೂ ಗುರಿಯಾಗಲಿ ಎಂದು ಅವರು ಈ ಶೆಮಾಯನಿಗೆ ಲಂಚಕೊಟ್ಟಿದ್ದರು.


ಸೌಲನು ಮೀಕಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲವೆ?” ಎನ್ನಲು, ಆಕೆ ಅವನಿಗೆ, “’ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ’ ಎಂದು ಹೇಳಿದ,” ಎಂದಳು.


ಸೌಲನು ಕೂಡಲೆ ದೂತರನ್ನು ಕರೆಯಿಸಿ, “ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕು,” ಎಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀವು ಈ ರಾತ್ರಿಯೇ ತಪ್ಪಿಸಿಕೊಳ್ಳದೆ ಇದ್ದರೆ ನಾಳೆ ಬೆಳಿಗ್ಗೆ ಹತರಾಗುವಿರಿ,” ಎಂದು ಹೇಳಿ


ಅನೀತಿವಂತನು ಮಾತಿನಿಂದ ನೆರೆಯವನನ್ನು ನಾಶಮಾಡುವನು; ನೀತಿವಂತನು ತಿಳುವಳಿಕೆಯಿಂದ ಅವನನ್ನು ಉದ್ಧಾರಮಾಡುವನು.


ತುಂಟನು ಜಗಳವನ್ನು ಹುಟ್ಟಿಸುತ್ತಾನೆ; ಚಾಡಿಕೋರನು ಮಿತ್ರರನ್ನು ಬೇರ್ಪಡಿಸುತ್ತಾನೆ.


ಕಣ್ಣುಮಿಟುಕಿಸುವವನು ಕುಯುಕ್ತಿಯನ್ನು ಕಲ್ಪಿಸುತ್ತಾನೆ; ತುಟಿಕಚ್ಚುವವನು ಕೇಡನ್ನು ಸಾಧಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು