Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:32 - ಕನ್ನಡ ಸತ್ಯವೇದವು C.L. Bible (BSI)

32 ದೀರ್ಘಶಾಂತನು ಪರಾಕ್ರಮಶಾಲಿಗಿಂತ ಶ್ರೇಷ್ಠ; ತನ್ನನ್ನು ತಾನೆ ಗೆದ್ದವನು ಪಟ್ಟಣ ಗೆದ್ದವನಿಗಿಂತ ಬಲಿಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ; ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಶೂರನಾಗಿರುವುದಕ್ಕಿಂತ ತಾಳ್ಮೆಯಿಂದಿರುವುದೇ ಶ್ರೇಷ್ಠ; ಪಟ್ಟಣವನ್ನು ವಶಪಡಿಸಿಕೊಳ್ಳುವುದಕ್ಕಿಂತ ನಿಮ್ಮ ಕೋಪವನ್ನು ಸ್ವಾಧೀನದಲ್ಲಿಟ್ಟುಕೊಳ್ಳವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:32
16 ತಿಳಿವುಗಳ ಹೋಲಿಕೆ  

ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.


ಉಗ್ರಕೋಪಿ ವ್ಯಾಜ್ಯವೆಬ್ಬಿಸುತ್ತಾನೆ; ದೀರ್ಘಶಾಂತನು ಜಗಳ ತೀರಿಸುತ್ತಾನೆ.


ಆತ್ಮಸ್ವಾಧೀನವಲ್ಲದ ಮನುಷ್ಯ ಗೋಡೆಬಿದ್ದು ಕಾವಲಿಲ್ಲದ ಹಾಳೂರು.


ದೀರ್ಘಶಾಂತನು ಬಹು ಬುದ್ಧಿವಂತನು; ಉಗ್ರಕೋಪಿ ಎತ್ತಿಹಿಡಿವನು ಮೂರ್ಖತನವನ್ನು.


ಕೇಡಿಗೆ ಸೋಲದೆ, ಒಳಿತಿನಿಂದ ಕೇಡನ್ನು ಸೋಲಿಸು.


ವಿವೇಕಿಯು ಸಿಟ್ಟುಗೊಳ್ಳಲು ತಡಮಾಡುತ್ತಾನೆ; ತಪ್ಪನ್ನು ಕ್ಷಮಿಸುವುದೆಂದರೆ ಅವನಿಗೆ ಹೆಮ್ಮೆ.


ಪ್ರಭು ದಯಾಳು, ಕೃಪಾಪೂರ್ಣನು I ಸಹನಶೀಲನು, ಪ್ರೀತಿಮಯನು II


ದೇವರ ಅಕ್ಕರೆಯ ಮಕ್ಕಳು ನೀವು. ಆದ್ದರಿಂದ ದೇವರನ್ನೇ ಅನುಸರಿಸಿ ಬಾಳಿರಿ.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಸೊಕ್ಕಿನವರ ಸಂಗಡ ಸೂರೆಹಂಚಿಕೊಳ್ಳುವುದಕ್ಕಿಂತಲು ದೀನದಲಿತರ ಸಂಗಡ ದೈನ್ಯದಿಂದಿರುವುದು ಮೇಲು.


ದಮಸ್ಕದ ಅಬಾನಾ ಹಾಗು ಪರ್ಪರ್ ಎಂಬ ನದಿಗಳು ಇಸ್ರಯೇಲರ ಎಲ್ಲಾ ನದಿ ಹೊಳೆಗಳಿಗಿಂತ ಉತ್ತಮವಾಗಿವೆಯಲ್ಲವೇ? ಸ್ನಾನದಿಂದ ವಾಸಿಯಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಿತ್ತಲ್ಲವೇ?” ಎಂದು ಹೇಳಿ, ಬಹಳ ಸಿಟ್ಟಿನಿಂದ ಹೊರಟುಹೋದನು.


ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.


ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು.


ಆದಿಗಿಂತ ಅಂತ್ಯ ಲೇಸು; ಗರ್ವಕ್ಕಿಂತ ತಾಳ್ಮೆ ಲೇಸು.


ಸಹನಶೀಲತೆಯಿಂದ ಅರಸನನ್ನೂ ಒಲಿಸಿಕೊಳ್ಳಬಹುದು; ಮೃದುವಾದ ನಾಲಿಗೆ ಎಲುಬನ್ನೂ ಮುರಿಯಬಲ್ಲದು.


ತವಕಬೇಡ ಕೋಪಮಾಡಲಿಕ್ಕೆ; ಕೋಪಕ್ಕೆ ನೆಲೆ ಮೂಢನ ಎದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು