Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:4 - ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಒಂದೊಂದನ್ನೂ ಸೃಷ್ಟಿಸಿರುವುದು ಒಂದು ಗುರಿಯಿಟ್ಟೇ ಹೌದು; ಕೆಡುಕರನ್ನು ಉಂಟುಮಾಡಿರುವುದು ಕೇಡಿನ ದಿನಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನುಂಟುಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಪ್ರತಿಯೊಂದನ್ನು ತನ್ನ ಉದ್ದೇಶಕ್ಕನುಸಾರವಾಗಿ ಮಾಡಿದ್ದಾನೆ. ಆತನು ಕೆಡುಕರನ್ನು ನಾಶನದ ದಿನಕ್ಕಾಗಿ ಇಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:4
14 ತಿಳಿವುಗಳ ಹೋಲಿಕೆ  

ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ದೇವರ ವಿಷಯದಲ್ಲಿಯೂ ಅಂತೆಯೇ. ದೇವರು ತಮ್ಮ ಕೋಪಾಗ್ನಿಯನ್ನು ಪ್ರದರ್ಶಿಸಿ, ತಮ್ಮ ಶಕ್ತಿಯನ್ನು ಪ್ರಕಟಿಸಲು ಬಯಸಿದರು. ಹಾಗೆಮಾಡದೆ ವಿಕೋಪಕ್ಕೂ ವಿನಾಶಕ್ಕೂ ಮಾಡಲಾಗಿದ್ದ ಕುಡಿಕೆಯನ್ನು ಹೋಲುವವರನ್ನು ಅತ್ಯಂತ ಸಹನೆಯಿಂದ ಸೈರಿಸಿಕೊಂಡರಾದರೆ, ಯಾರು ಏನನ್ನು ತಾನೇ ಹೇಳಲಾದೀತು?


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.


ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.


ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.


ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಗರ್ವಿಷ್ಠನು ಯಾರೇ ಆಗಿರಲಿ, ಅವನು ಸರ್ವೇಶ್ವರನಿಗೆ ಅಸಹ್ಯ; ಅವನಿಗೆ ದಂಡನೆ ತಪ್ಪದು, ಇದು ಖಂಡಿತ.


ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.


ಹೊಟ್ಟೆಪಾಡಿಗಾಗಿ ಹುಡುಕುತ್ತಾ ಅಲೆದಾಡುತ್ತಾನೆ ಆ ಕತ್ತಲ ದಿನ ಹತ್ತಿರವಿದೆಯೆಂದು ಅರಿತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು