Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:8 - ಕನ್ನಡ ಸತ್ಯವೇದವು C.L. Bible (BSI)

8 ಅನ್ಯಾಯದಿಂದ ಗಳಿಸಿದ ಅಪಾರ ನಿಧಿಗಿಂತಲು ನ್ಯಾಯದಿಂದ ಕೂಡಿಸಿದ ಅಲ್ಪ ಧನ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅನ್ಯಾಯದಿಂದ ಹೆಚ್ಚು ಸಂಪಾದಿಸುವುದಕ್ಕಿಂತ ನ್ಯಾಯವಾಗಿ ಸ್ವಲ್ಪ ಸಂಪಾದಿಸುವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅನ್ಯಾಯದ ದೊಡ್ಡ ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:8
12 ತಿಳಿವುಗಳ ಹೋಲಿಕೆ  

ನೆಮ್ಮದಿಯಿಲ್ಲದ ಸಿರಿಸಂಪತ್ತಿಗಿಂತಲು, ಸರ್ವೇಶ್ವರನ ಭಯಭಕ್ತಿಯಿಂದ ಕೂಡಿದ ಕಿಂಚಿತ್ತೇ ಮೇಲು.


ದುರುಳರ ವಿಪುಲ ಆಸ್ತಿಪಾಸ್ತಿಗಿಂತಲು I ಸತ್ಯವಂತರ ಬಡತನವೆನಿತೊ ಮಿಗಿಲು II


ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”


“ನಗರದ ಸಭಿಕರೇ, ಕೇಳಿ! ಅಕ್ರಮವಾಗಿ ಗಳಿಸಿದ ಆಸ್ತಿ ದುರುಳರ ಮನೆಯಲ್ಲಿರುವುದು ನನಗೆ ಗೊತ್ತಿಲ್ಲವೆ? ಅವರ ಮೋಸದ ಅಳತೆಗಳನ್ನು ನಾನು ಒಪ್ಪುವುದು ಸಾಧ್ಯವೆ?


ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ಮನುಷ್ಯ ಮನಬಂದಂತೆ ಮಾರ್ಗವನ್ನಾರಿಸಿಕೊಂಡರೂ ಸರ್ವೇಶ್ವರನೇ ಅವನ ನಡತೆಯನ್ನು ಪರಾಂಬರಿಸುವವನು.


ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎರಡು ಕೈಹಿಡಿ ವ್ಯರ್ಥ ಪರಿಶ್ರಮಕ್ಕಿಂತ ಒಂದೇ ಕೈಹಿಡಿಯಷ್ಟು ಸಂಪಾದನೆ ಪಡೆದು ನೆಮ್ಮದಿಯಿಂದಿರುವುದು ಲೇಸು.


ದ್ವೇಷವಿರುವಲ್ಲಿ ಕೊಬ್ಬಿದ ಮಾಂಸಭೋಜನಕ್ಕಿಂತ, ಪ್ರೀತಿಯಿರುವಲ್ಲಿ ಸೊಪ್ಪಿನ ಊಟವೇ ಲೇಸು.


ಜಗಳ ತುಂಬಿದ ಮನೆಯಲ್ಲಿ ಹಬ್ಬದೂಟ ಮಾಡುವುದಕ್ಕಿಂತಲು ಶಾಂತಿ ಸಮಾಧಾನದಿಂದ ಕೂಡಿದ ಒಣ ತುತ್ತೇ ಲೇಸು.


ದುರ್ಮಾರ್ಗಿಯಾದ ಧನವಂತನಿಗಿಂತ ನಿರ್ದೋಷಿಯಾಗಿ ನಡೆವ ದರಿದ್ರನೇ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು