Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:10 - ಕನ್ನಡ ಸತ್ಯವೇದವು C.L. Bible (BSI)

10 ಮಂದಮತಿಗೆ ನೂರು ಗುದ್ದು; ಬುದ್ಧಿವಂತನಿಗೆ ಒಂದು ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮಂದನಿಗೆ ನೂರು ಪೆಟ್ಟು ಹೊಡೆಯುವದಕ್ಕಿಂತಲೂ ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೂಢನಿಗೆ ಮನವರಿಕೆ ಮಾಡಲು ನೂರು ಏಟುಗಳು ಬೇಕಾದರೂ ಜ್ಞಾನಿಗೆ ಒಂದೇ ಗದರಿಕೆಯು ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬುದ್ಧಿಹೀನನ ಬೆನ್ನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:10
10 ತಿಳಿವುಗಳ ಹೋಲಿಕೆ  

ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಮಾತಿನಿಂದ ಮಾತ್ರ ಸೇವಕನನ್ನು ತಿದ್ದಲಾಗದು; ಮಾತು ಕಿವಿಗೆ ಬಿದ್ದರೂ ಅದನ್ನು ಗ್ರಹಿಸಲಾರದು.


ಮೂರ್ಖನನ್ನು ಕಾಳಿನ ಸಂಗಡ ಒರಳಿಗೆ ಹಾಕಿ ಒನಕೆಯಿಂದ ಕುಟ್ಟಿದರೂ ಮೂರ್ಖತನ ತೊಲಗದು.


ಕುಚೋದ್ಯನಿಗೆ ಹೊಡೆ, ಮುಗ್ಧರು ಅದನ್ನು ಕಂಡು ಜಾಣರಾಗುವರು; ಜ್ಞಾನಿಯನ್ನು ಗದರಿಸಿದರೆ ಸಾಕು, ಅವನು ಮತ್ತಷ್ಟು ಜ್ಞಾನಿಯಾಗುವನು.


ಮೂರ್ಖನು ತಂದೆಯ ಶಿಕ್ಷಣವನ್ನು ನಿರ್ಲಕ್ಷ್ಯ ಮಾಡುತ್ತಾನೆ; ಜಾಣನು ಆತನ ಗದರಿಕೆಯನ್ನೂ ಗಮನಿಸುತ್ತಾನೆ.


ಬುದ್ಧಿವಂತ ಮಗ ತಂದೆಯ ಶಿಕ್ಷಣವನ್ನು ಕೇಳುವನು; ಕಿತ್ತಾಡುವ ಮಗ ಗದರಿಕೆಯನ್ನೂ ಕೇಳಲೊಲ್ಲನು.


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ತಪ್ಪನ್ನು ಮನ್ನಿಸುವವನು ಪ್ರೀತಿಯನ್ನು ಅರಸುತ್ತಾನೆ; ತಪ್ಪನ್ನು ಎತ್ತಿ ಆಡುವವನು ಆಪ್ತನನ್ನೂ ಕಳೆದುಕೊಳ್ಳುತ್ತಾನೆ.


ದುರಾತ್ಮನ ಕಣ್ಣೆಲ್ಲಾ ದಂಗೆ ಏಳುವುದರ ಮೇಲೆ; ಕ್ರೂರದೂತನು ಎರಗಿ ಬರುವನು ಅವನ ಮೇಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು