Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:11 - ಕನ್ನಡ ಸತ್ಯವೇದವು C.L. Bible (BSI)

11 ದುರಾತ್ಮನ ಕಣ್ಣೆಲ್ಲಾ ದಂಗೆ ಏಳುವುದರ ಮೇಲೆ; ಕ್ರೂರದೂತನು ಎರಗಿ ಬರುವನು ಅವನ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದುರಾತ್ಮನಿಗೆ ದಂಗೆಯ ಮೇಲೇ ಮನಸ್ಸು; ಕ್ರೂರದೂತನು ಅವನ ಮೇಲೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದುಷ್ಟನಿಗೆ ದೇವರ ವಿರುದ್ಧ ದಂಗೆ ಏಳುವುದಕ್ಕೆ ಇಷ್ಟ. ಕೊನೆಯಲ್ಲಿ ದೇವರು ತನ್ನ ದೂತನನ್ನು ಕಳುಹಿಸಿ ಅವನನ್ನು ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ತಿರುಗಿ ಬೀಳುವವನು ಕೆಟ್ಟದ್ದಕ್ಕೇ ತವಕಪಡುತ್ತಾನೆ; ಆದಕಾರಣ ಮರಣ ದೂತರನ್ನು ಅವನ ವಿರುದ್ಧ ಕಳುಹಿಸಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:11
15 ತಿಳಿವುಗಳ ಹೋಲಿಕೆ  

ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ ಯೋವಾಬನ ಆಯುಧಗಳನ್ನು ಹೊರುವ ಹತ್ತುಮಂದಿ ಯುವಕರು ಬಂದು ಅವನನ್ನು ಕೊಂದುಹಾಕಿದರು.


ಬಳಿಕ ಯೆಹೋಯಾದವನ ಮಗ ಬೆನಾಯನಿಗೆ ಅವನನ್ನು ಸಂಹರಿಸಬೇಕೆಂದು ಆಜ್ಞಾಪಿಸಿದನು. ಅಂತೆಯೇ ಇವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರ ಸುಭದ್ರವಾಯಿತು.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


“ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು.


ಅರಸನು, “ಅವನು ಹೇಳಿದಂತೆ ಮಾಡು; ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದುದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.


ಅವರು ಬಿಕ್ರೀಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನಿದ್ದಲ್ಲಿಗೆ ಬಿಸಾಡಿದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಅವನ ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಜೆರುಸಲೇಮಿನಲ್ಲಿದ್ದ ಅರಸನ ಬಳಿಗೆ ಬಂದನು.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ, ನಾನು ಅರಸರ ಬಳಿಗೆ ಓಡಿಹೋಗಿ ಸರ್ವೇಶ್ವರಸ್ವಾಮಿ ವೈರಿಗಳಿಗೆ ಮುಯ್ಯಿತೀರಿಸಿದ್ದಾರೆಂಬ ಶುಭವರ್ತಮಾನವನ್ನು ತಿಳಿಸುತ್ತೇನೆ,” ಎಂದನು.


ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.


ಮಂದಮತಿಗೆ ನೂರು ಗುದ್ದು; ಬುದ್ಧಿವಂತನಿಗೆ ಒಂದು ಮಾತು.


ಮೂರ್ಖತನದಲ್ಲಿ ಮುಳುಗಿರುವ ಮೂಢನಿಗೆ ಎದುರಾಗುವುದಕ್ಕಿಂತಲು ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವುದು ಲೇಸು.


ಮಗನೇ, ಸರ್ವೇಶ್ವರನಿಗೂ ರಾಜನಿಗೂ ಭಯಪಡು; ಅವರನ್ನು ವಿರೋಧಿಸುವವರ ಗೊಡವೆಗೆ ಹೋಗಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು