Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:15 - ಕನ್ನಡ ಸತ್ಯವೇದವು C.L. Bible (BSI)

15 ದುರ್ಜನರನ್ನು ಸಜ್ಜನರೆಂದೂ, ಸಜ್ಜನರನ್ನು ದುರ್ಜನರೆಂದೂ ನಿರ್ಣಯಿಸುವ ಇಬ್ಬರೂ ಸರ್ವೇಶ್ವರನಿಗೆ ಅಸಹ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು, ನೀತಿವಂತರನ್ನು ಖಂಡಿಸುವವನೂ ಇವರಿಬ್ಬರೂ ಯೆಹೋವ ದೇವರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:15
23 ತಿಳಿವುಗಳ ಹೋಲಿಕೆ  

ನಿರಪರಾಧಿಯೂ ನೀತಿವಂತನೂ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಲೇಕೂಡದು; ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.


ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !


ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.


ಕಲ್ಲುಬಂಡೆಗಳ ಮೇಲೆ ಕುದುರೆಗಳು ಓಡಾಡುವುದುಂಟೋ? ಎತ್ತು ಹೋರಿಗಳಿಂದ ಕಡಲನ್ನು ಉಳುವುದುಂಟೋ? ನೀವೋ, ವಿಷವನ್ನಾಗಿಸಿದ್ದೀರಿ ನ್ಯಾಯನೀತಿಯನ್ನು, ಕಹಿಯಾಗಿಸಿದ್ದೀರಿ ಧರ್ಮದ ಸತ್ಫಲವನ್ನು.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.


ಆದರೆ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು, ಅಧರ್ಮಿಗಳನ್ನು ಸದ್ಧರ್ಮಿಗಳನ್ನಾಗಿಸುವ ದೇವರಲ್ಲಿ ವಿಶ್ವಾಸವಿಡುತ್ತಾರೋ ಅಂಥವರ ವಿಶ್ವಾಸವನ್ನು ದೇವರು ಅಂಗೀಕರಿಸಿ, ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.


ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.


ನ್ಯಾಯವನ್ನು ಕಹಿಯಾಗಿಸುವವರೇ, ಧರ್ಮವನ್ನು ಕಸವಾಗಿಸುವವರೇ, ನಿಮಗೆ ಧಿಕ್ಕಾರ!


ಸರ್ವೇಶ್ವರ ಹಗೆಮಾಡುವಂಥಹವು ಆರು: ಆತ ಖಂಡನೆ ಮಾಡುವಂಥಹವು ಏಳು: ಅಹಂಕಾರ ದೃಷ್ಟಿ, ಕಪಟವಾಡುವ ನಾಲಿಗೆ, ನಿರಪರಾಧಿಯನ್ನು ಕೊಲೆಮಾಡುವ ಕೈ, ದುರಾಲೋಚನೆಯನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತವಕಪಡುವ ಕಾಲು, ಅಸತ್ಯವನ್ನು ಉಸುರುವ ಸುಳ್ಳುಸಾಕ್ಷಿ, ಸೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಕಳ್ಳತಕ್ಕಡಿ ಸರ್ವೇಶ್ವರನಿಗೆ ಅಸಹ್ಯ; ನ್ಯಾಯವಾದ ತೂಕ ಆತನಿಗೆ ಪ್ರಿಯ.


ಹೊಂಚುಹಾಕುವರವರು ನೀತಿವಂತರ ಪ್ರಾಣಕೆ I ಮರಣಶಿಕ್ಷೆ ವಿಧಿಸುವರವರು ನಿರಪರಾಧಿಗಳಿಗೆ II


ನೀತಿವಂತನಿಗೆ ದಂಡ ಸರಿಯಲ್ಲ; ಸಜ್ಜನನಿಗೆ ಶಿಕ್ಷೆ ನ್ಯಾಯವಲ್ಲ.


ಕುಡಿದರೆ ಕರ್ತವ್ಯವನ್ನು ಮರೆಯುತ್ತಾರೆ; ದೀನದಲಿತರಿಗೆ ನ್ಯಾಯ ತೀರಿಸದೆ ತಾರತಮ್ಯ ಮಾಡುತ್ತಾರೆ.


ಕೆಟ್ಟದ್ದನ್ನು ಒಳ್ಳೆಯದೆಂದೂ ಒಳ್ಳೆಯದನ್ನು ಕೆಟ್ಟದ್ದೆಂದೂ ಬೋಧನೆ ಮಾಡುವವರಿಗೆ ಧಿಕ್ಕಾರ ! ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸುವಂಥವರಿಗೆ ಧಿಕ್ಕಾರ ! ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿಯೆಂದೂ ವಾದಿಸುವಂಥವರಿಗೆ ಧಿಕ್ಕಾರ !


ಪರಾತ್ಪರನ ಸನ್ನಿಧಿಯಲ್ಲೇ ನ್ಯಾಯ ತಪ್ಪಿಸುವುದನ್ನೂ


“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು