Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:17 - ಕನ್ನಡ ಸತ್ಯವೇದವು C.L. Bible (BSI)

17 ಮಿತ್ರನ ಪ್ರೀತಿ ನಿರಂತರ; ಕಷ್ಟಕ್ಕಾದವನೆ ಹುಟ್ಟುನಂಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ವಿುತ್ರನ ಪ್ರೀತಿಯು ನಿರಂತರ; ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸ್ನೇಹಿತನು ಯಾವಾಗಲೂ ಪ್ರೀತಿಸುವನು. ಕಷ್ಟದ ಸಮಯಗಳಲ್ಲಿ ಸಹೋದರನು ಸಹಾಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ; ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:17
16 ತಿಳಿವುಗಳ ಹೋಲಿಕೆ  

ಗೆಳೆಯರಂತೆ ನಟಿಸಿ ನಾಶಗೊಳಿಸುವವರು ಅನೇಕರುಂಟು; ಸಹೋದರನಿಗಿಂತ ಪ್ರಿಯನಾದ ಸ್ನೇಹಿತನೂ ಉಂಟು.


ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಾ ಇದ್ದುದರಿಂದ, ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.


ಬಡವನನ್ನು ಬಂಧುಗಳೆಲ್ಲರು ಹಗೆಮಾಡುವರು; ಮಿತ್ರರೋ ಖರೆಯಾಗಿ ಅವನಿಗೆ ದೂರವಾಗುವರು; ಹಿಂಬಾಲಿಸಿ ಬರುವವರು ಅವನ ಬಾಯಿಮಾತನ್ನು ನಂಬರು.


ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು.


ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.


ಅದಕ್ಕೆ ರೂತಳು: “ನಿಮ್ಮನ್ನು ಬಿಟ್ಟು ಹೋಗುವಂತೆ ಒತ್ತಾಯಪಡಿಸಬೇಡಿ. ನೀವು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುತ್ತೇನೆ. ನೀವು ಎಲ್ಲಿ ವಾಸಿಸಿದರೂ ನಾನು ಅಲ್ಲೇ ವಾಸಿಸುತ್ತೇನೆ.


ನೀನೀಗ ಸುಮ್ಮನಿದ್ದುಬಿಟ್ಟರೆ ಬೇರಾವ ಕಡೆಯಿಂದಲೂ ಯೆಹೂದ್ಯರಿಗೆ ಸಹಾಯವಾಗಲಿ, ವಿಮೋಚನೆಯಾಗಲಿ ದೊರಕದು. ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗಿಹೋಗುವೆ. ಇದಲ್ಲದೆ ಇಂಥ ಸಂದರ್ಭಕ್ಕಾಗಿಯೇ ನೀನು ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು?” ಎಂದು ಹೇಳಿಕಳುಹಿಸಿದನು.


ಯೋನಾತಾನನೇ, ಸಹೋದರನೇ, ಮನೋಹರನೇ, ನಿನ್ನ ಮರಣ ತಂದಿದೆ ಅತೀವ ಸಂಕಟ ನನಗೆ, ನನ್ನ ಮೇಲೆ ನಿನಗಿದ್ದ ಪ್ರೀತಿ ಅದೆಷ್ಟು ಆಶ್ಚರ್ಯಕರ! ಸತಿಪ್ರೇಮಕ್ಕಿಂತಲೂ ಅದು ಅಮೋಘಕರ!


ಆಗ ಸೌಲನ ಮಗ ಯೋನಾತಾನನು ಅಲ್ಲಿಗೆ ಹೋಗಿ,


ಆದುದರಿಂದ ಅವನು ದಾವೀದನಿಗೆ, “ನನ್ನ ತಂದೆ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾರೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಟ್ಟಾದ ಸ್ಥಳದಲ್ಲಿ ಅಡಗಿಕೊಂಡಿರು.


ಅದಕ್ಕೆ ಇತ್ತೈ, “ಸರ್ವೇಶ್ವರನಾಣೆ, ನನ್ನ ಒಡೆಯರಾದ ಅರಸರ ಜೀವದಾಣೆ, ಪ್ರಾಣಹೋದರೂ ಉಳಿದರೂ ನನ್ನ ಒಡೆಯರಾದ ಅರಸರಿರುವಲ್ಲಿಗೇ ಹೋಗುವೆನು,” ಎಂದು ಉತ್ತರಕೊಟ್ಟನು.


ನನ್ನ ತಂದೆಯ ಬಳಿಯಲ್ಲಿದ್ದು ನಿನ್ನ ಬಗ್ಗೆ ಅವರೊಡನೆ ಮಾತಾಡಿ ಗೊತ್ತಾದ ವಿಷಯವನ್ನು ನೀನು ಅವಿತುಕೊಂಡಿರುವ ಸ್ಥಳಕ್ಕೆ ಬಂದು ತಿಳಿಸುವೆನು,” ಎಂದು ಹೇಳಿದನು.


ತುಂಟನು ಜಗಳವನ್ನು ಹುಟ್ಟಿಸುತ್ತಾನೆ; ಚಾಡಿಕೋರನು ಮಿತ್ರರನ್ನು ಬೇರ್ಪಡಿಸುತ್ತಾನೆ.


ಬುದ್ಧಿಹೀನನಾದ ಮಗ ತಂದೆಗೆ ತರುತ್ತಾನೆ ಹಾನಿ; ಜಗಳವಾಡುವ ಹೆಂಡತಿ ತಟತಟನೆ ತೊಟ್ಟಿಕ್ಕುವ ಹನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು