Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:24 - ಕನ್ನಡ ಸತ್ಯವೇದವು C.L. Bible (BSI)

24 ವಿವೇಕಿಗೆ ಜ್ಞಾನವೇ ಗುರಿ ಧ್ಯೇಯ; ಮೂಢನ ದೃಷ್ಟಿ ದಿಗಂತದಷ್ಟು ವಿಶಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ವಿವೇಕಿಗೆ ಜ್ಞಾನವೇ ಗುರಿಯಾಗಿರುವದು; ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ವಿವೇಕಿಯು ಜ್ಞಾನದ ಮೇಲೆ ಮನಸ್ಸಿಡುತ್ತಾನೆ. ಆದರೆ ಮೂಢನು ಬಹುದೂರದ ಸ್ಥಳಗಳ ಬಗ್ಗೆ ಕನಸು ಕಾಣುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ವಿವೇಕಿಯು ಜ್ಞಾನವನ್ನು ತನ್ನ ಮುಂದೆ ಇಟ್ಟುಕೊಳ್ಳುತ್ತಾನೆ. ಆದರೆ ಬುದ್ಧಿಹೀನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಅಲೆಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:24
10 ತಿಳಿವುಗಳ ಹೋಲಿಕೆ  

“ಜ್ಞಾನಿಗೆ ಹಣೆಯಲ್ಲಿ ಕಣ್ಣು, ಮೂಢನೋ ಕತ್ತಲೆಯಲ್ಲಿ ನಡೆಯುತ್ತಾನೆ". ಆದರೆ ಇವರಿಬ್ಬರ ಗತಿ ಒಂದೇ ಎಂದು ಕಂಡುಬಂದಿತು.


ಜ್ಞಾನಿಗೆ ಸಮಾನರು ಯಾರು? ಅವನಲ್ಲದೆ ಬಗೆಹರಿಸಬಲ್ಲವರು ಯಾರು? ಜ್ಞಾನವು ಮನುಷ್ಯನ ಮುಖವನ್ನು ವಿಕಾಸಗೊಳಿಸುತ್ತದೆ; ಗಂಟುಮೋರೆಯನ್ನು ಮಾರ್ಪಡಿಸುತ್ತದೆ.


ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.


ಬಗೆಬಗೆಯಾಗಿ ಬಯಸುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದೇ ಲೇಸು. ಆದರೆ ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ನಿರರ್ಥಕ.


ಕುಚೋದ್ಯನಿಗೆ ಜ್ಞಾನ ಹುಡುಕಿದರೂ ಸಿಕ್ಕದು; ವಿವೇಕಿಗೆ ತಿಳುವಳಿಕೆ ಸುಲಭವಾಗಿ ದಕ್ಕುವುದು.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ವಿವೇಕಿಯ ಮನ ತಿಳುವಳಿಕೆಯನ್ನು ಅರಸುವುದು; ಮತಿಹೀನನ ಬಾಯಿ ಮೂರ್ಖತನವನ್ನು ಮುಕ್ಕುವುದು.


ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II


ಬುದ್ಧಿಹೀನನಾದ ಮಗನು ತಂದೆಗೆ ಕಿರಿಕಿರಿ; ಹೆತ್ತತಾಯಿಗೆ ಅವನು ಕರಕರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು